ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅನುಚಿತ ವರ್ತನೆ ತೋರಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಕ್ಸೊ ಪ್ರಕರಣದ ಆರೋಪಿ ಕಾನ್ಸ್ಟೇಬಲ್ಗೆ ಸ್ಥಳೀಯರು ಧರ್ಮಧೇಟು ನೀಡಿ, ನಂತರ ಆರೋಪಿಯನ್ನು ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. 9 ವರ್ಷದ ಬಾಲಕಿಯನ್ನು ಮನೆಗೆ ಕರೆಸಿಕೊಂಡಿದ್ದು, ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಖಾದೀರ್ ಅನುಚಿತ ವರ್ತನೆ ತೋರಿದ್ದಾರೆಂದು ತಿಳಿದುಬಂದಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಹುದ್ದಗಳಿಗೆ ಅರ್ಜಿ ಆಹ್ವಾನ
ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.