ಧಾರವಾಡ | ಆಧುನಿಕ ಜೀವನ ಶೈಲಿಯೇ ಕ್ಯಾನ್ಸರ್ ಖಾಯಿಲೆಗೆ ಕಾರಣ: ಡಾ. ಸಂಗಪ್ಪಾ ಗಾಬಿ

Date:

Advertisements

ಕ್ಯಾನ್ಸರ್ ಖಾಯಿಲೆಯಿಂದ ಮುಕ್ತವಾಗಲು ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ತಂಬಾಕು ಉತ್ಪನ್ನ, ಮಧ್ಯಪಾನ ಮತ್ತು ಧೂಮ್ರಪಾನಗಳಿಂದ ದೂರವಿರಬೇಕು. ಕ್ಯಾನ್ಸರ್ ಖಾಯಿಲೆಗೆ ಆಧುನಿಕ ಜೀವನ ಶೈಲಿ ಕಾರಣ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ, ಜಿಲ್ಲಾ ಎನ್.ಸಿ.ಡಿ ಕ್ಲಿನಿಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಂಬಾಕು ವ್ಯಸನಮುಕ್ತ ಕೇಂದ್ರ, ಧಾರವಾಡ ಜಿಲ್ಲಾ ಆಸ್ಪತ್ರೆಯಿಂದ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ (ಎನ್‍ಪಿ-ಎನ್‍ಸಿಡಿ) ದ ಅಡಿಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಫೆ. 04ರಂದು ಮಧುಮೇಹ, ರಕ್ತದೊತ್ತಡ ಹಾಗೂ ಸಾಮಾನ್ಯ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.

ಧಾರವಾಡ ಜಿಲ್ಲೆಯಲ್ಲಿ ಕಳೆದ ಎಪ್ರಿಲ್ 2024 ರಿಂದ ಜನವರಿ 2025 ವರೆಗೆ ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ಕ್ಲಿನಿಕ್‍ದಲ್ಲಿ ವಿವಿಧ ರೀತಿಯ ಸುಮಾರು 57 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ. ಜನರ ಜೀವನ ಶೈಲಿಯಿಂದ ಇಂದು ಕ್ಯಾನ್ಸರ್ ರೋಗವು ಸಾಮಾನ್ಯವಾಗಿ ಕಾಣುತ್ತಿದೆ. ಜಿಲ್ಲೆಯಲ್ಲಿ ನಾಲಿಗೆ ಕ್ಯಾನ್ಸರ್, ಬಾಯಿ ಹುಣ್ಣಿನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಧ್ವನಿಪೆಟ್ಟಿಗೆಯ ಕ್ಯಾನ್ಸರ್ ಕಂಡುಬರುತ್ತಿವೆ. ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕ್ಯಾನ್ಸರ್ ತಪಾಸಣೆ ಮಾಡಲಾಗುತ್ತದೆ. ಕ್ಯಾನ್ಸರ್ ರೋಗ ದೃಢವಾದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್, ನವನಗರ ಕ್ಯಾನ್ಸರ್ ಆಸ್ಪತ್ರೆ ಹಾಗೂ ಇತರ ಖಾಸಗಿ ಕ್ಯಾನ್ಸರ್ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಲಾಗುತ್ತದೆ. ರೋಗದ ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು ಎಂದರು.

Advertisements

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪರಶುರಾಮ ಎಫ್. ಕೆ. ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ವಿವಿಧ ಎನ್.ಸಿ.ಡಿ ಕ್ಲಿನಿಕ್‍ಗಳಲ್ಲಿ 154 ಪುರಷ ಹಾಗೂ 225 ಮಹಿಳೆಯರು ಸೇರಿ ಒಟ್ಟು 379 ಜನರಲ್ಲಿ ಕ್ಯಾನ್ಸರ್ ತಪಸಣೆ ಮಾಡಲಾಗಿದೆ ಎಂದರು.

ಎನ್.ಪಿ.ಪಿ.ಸಿ ವಿಭಾಗದ ಜನರಲ್ ಫಿಜಿಸಿಯನ್ ಡಾ. ವಿವೇಕಾನಂದ ಕಾಮತ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಕ್ಯಾನ್ಸರ್ ದಿನಾಚರಣೆಯ ಘೋಷವಾಕ್ಯ–ವಿಶಿಷ್ಟತೆಯಿಂದ ಏಕತೆ ಕುರಿತು ಹಾಗೂ ಬಾಯಿ, ಸ್ತನ್ ಹಾಗೂ ಗರ್ಭಕೊರಳು ಮುಂತಾದ ಸಾಮಾನ್ಯ ಕ್ಯಾನ್ಸರ್‍ಗಳ ಲಕ್ಷಣಗಳು ಹಾಗೂ ತಡೆಗಟ್ಟುವಿಕೆಯ ಕುರಿತು ತಿಳಿಸಿದರು.

ಈ ವರದಿ ಓದಿದ್ದೀರಾ? ಧಾರವಾಡ | ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ವಾಸ್ತವ: ಎಸ್ ಆರ್ ಗುಂಜಾಳ

ನೇತ್ರಾವತಿ ಆಸಂಗಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಮುಖ್ಯ ಚಿಕಿತ್ಸಕ ಡಾ. ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್‍ನ ಜನರಲ್ ಫಿಜಿಸಿಯನ್ ಡಾ. ವಾಸಂತಿ ಜೀರಗಳ, ಎನ್.ಪಿ.ಎಚ್.ಸಿ.ಇ ಜನರಲ್ ಫಿಜಿಸಿಯನ್ ಡಾ. ನಿವೇದಿತಾ ಪಾಟೀಲ, ಡಾ. ಹೀನಾ ಮತ್ತು ಎನ್.ಪಿ.ಪಿ.ಸಿ ವೈದ್ಯಾಧಿಕಾರಿ ರಿಂದವ್ವ ನಾವಳ್ಳಿ, ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಜಿಲ್ಲಾ ಎನ.ಸಿ.ಡಿ ಕ್ಲಿನಿಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಂಬಾಕು ವ್ಯಸನಮುಕ್ತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಯ ಎಲ್ಲ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X