ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

Date:

ಅನ್ನ ದಾಸೋಹ, ಜ್ಞಾನ ದಾಸೋಹ, ಅಕ್ಷರ ದಾಸೋಹದ ಮೂಲಕ‌ ಧಾರವಾಡ ಮುರುಘಾಮಠವು ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದು, ಇಡೀ ಕರ್ನಾಟಕದಲ್ಲಿ ದಾಸೋಹದ ಮೂಲಕ ಪ್ರಸಿದ್ಧಿ ಪಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

- Advertisement -

ಮುರುಘಾಮಠದ ಜಾತ್ರಾ ಮಹೋತ್ಸವ ಅಂಗವಾಗಿ ಮಠಕ್ಕೆ ಭೇಟಿ ನೀಡಿದ ಅವರು ಮಾತನಾಡುತ್ತ, ಮಠದಲ್ಲಿ ಸಮಯಕ್ಕೆ ತಕ್ಕಂತೆ ಬದಲಾಗಬೇಕಿದ್ದ ಕೆಲವು ವ್ಯವಸ್ಥೆಗಳು ಬದಲಾಗಬೇಕಿದೆ. ಮಠದ ಮೂಲಕ‌ ಇನ್ನೂ ದೊಡ್ಡ ಪ್ರಮಾಣದಲ್ಲಿ‌ ಜ್ಞಾನಾರ್ಜನೆ ಮತ್ತು ದಾಸೋಹ ಕಾರ್ಯ ಮುಂದುವರೆಯಲಿ ಎಂಬುದು ಎಲ್ಲರ ಅಭಿಲಾಷೆಯಾಗಿದ್ದು, ಆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಮಠವನ್ನು ಇನ್ನೂ ಉಚ್ಛ್ರಾಯ ಸ್ಥಿತಿಗೆ ತಲುಪಿಸುವಲ್ಲಿ ಮುಂದಾಗಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಮುರುಘಾಠಕ್ಕೆ ಒಂದು ಒಳ್ಳೆಯ ಇತಿಹಾಸವಿದೆ. ಈ ಇತಿಹಾಸವನ್ನು‌ ಮುಂದುವರೆಸುವ ಕಾರ್ಯ ಹೆಚ್ಚಾಗಲಿ. ಇವತ್ತು ಬಹುತೇಕರು ದೇಶದ ಉನ್ನತ ಸ್ಥಾನದಲ್ಲಿ ಇದ್ದಾರೆಂದರೆ; ಅದು ಮುರುಘಾಮಠವೇ ಕಾರಣವಾಗಿದೆ. ನಾನು‌ ಶ್ರೀಮಠಕ್ಕೆ ಬಂದರೆ ಸಾಮಾನ್ಯ ಭಕ್ತನಾಗಿ ಬರುತ್ತೇನೆಯೇ ಹೊರತು ರಾಜಕೀಯ ವ್ಯಕ್ತಿಯಾಗಿ ಬರುವುದಿಲ್ಲ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಧಾರವಾಡ | ಪಿಂಜಾರ ಸಮುದಾಯ ಆರ್ಥಿಕವಾಗಿ ಹಿಂದುಳಿದಿದೆ: ಡಾ. ಟಿ ಟಿ ಬಸನಗೌಡರ

ಈ ಸಂದರ್ಭದಲ್ಲಿ ಪತ್ರಕರ್ತರನ್ನು ಸನ್ಮಾನಿಸಿದರು. ಹೊನವಾಡದ ಸಂಚಾರಿ ಶರಣ ಬಾಬು ಮಹಾರಾಜರು ಉಪನ್ಯಾಸ ನೀಡಿದರು. ನಿಡಸೋಸಿ‌ಮಠದ ಪಂಚಮ‌ ಶಿವಲಿಂಗೇಶ್ವರ ಸ್ವಾಮೀಜಿ ಪಾವನಸಾನಿದ್ಯ ವಹಿಸಿದ್ದರು. ದುರುದಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಸಾನಿದಗಯ ವಹಿಸಿದ್ದರು. ದೊಡ್ಡಹುಣಸೆಮಠದ ಚನ್ನಬಸವ ಸ್ವಾಮೀಜಿ, ಫಲಹಾರೇಶ್ವರ ಮಠದ ಶಿವಮೂರ್ತಿ ಸ್ವಾಮೀಜಿ ಸಮ್ಮುಖದಲ್ಲಿದ್ದರು. ಗಡಹಿಂಗ್ಲಜ ಮಠದ ಮಹಾಂತ ಸಿದ್ದೇಶ್ವರ ಸ್ವಾಮೀಜಿ ಗುರುವಂದನೆ ಸ್ವೀಕರಿಸಿದರು. ಮಠದ ಭಕ್ತರು, ವಿದ್ಯಾರ್ಥಿಗಳು ಇದ್ದರು. ಪ್ರಾಚಾರ್ಯ ಎಮ್ ಎಸ್ ಗಾಣಿಗೇರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...