ಧಾರವಾಡ | ದ್ಯಾಮವ್ವ, ದುರ್ಗವ್ವರ ಮೂರ್ತಿ ಹೊತ್ತು ಭಾವೈಕ್ಯತೆ ಮೆರೆದ ಮುಸ್ಲಿಮರು

Date:

ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು ಹೊನ್ನಾಟವಾಡಿ ಭಾವೈಕ್ಯತೆ ಮೆರೆದಿದ್ದಾರೆ.

- Advertisement -

ಬಿಳಿ ಶುಭ್ರ ಬಟ್ಟೆ ತೊಟ್ಟ ಮುಸ್ಲಿಮರು ತಲೆಗೆ ಬಿಳಿ ಟೋಪಿ ಧರಿಸಿ ಹೊನ್ನಾಟದ ಓಕುಳಿಯಲ್ಲಿ ಮಿಂದೆದ್ದರು. ಇದರಲ್ಲಿ ಮುಸ್ಲಿಂ ಮಹಿಳೆಯರೂ ಪಾಲ್ಗೊಂಡಿದ್ದರು. ಹಿಂದೂಗಳು ಜಾತ್ರೆಗಾಗಿ ಮಾಡುವ ಎಲ್ಲ ಸಂಪ್ರದಾಯ, ಪದ್ಧತಿಗಳನ್ನು ಚಾಚೂ ತಪ್ಪದೆ ಮುಸ್ಲಿಮರೂ ಪಾಲಿಸಿದ್ದಾರೆ. ದೇವಿಗೆ ಉಡಿ ತುಂಬಿ ಮಂಗಳಾರತಿ ಆದ ನಂತರ ಮುಸ್ಲಿಂ ಸಂಪ್ರದಾಯದಂತೆ ಕಲಮಾ ಪಠಣ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಧಾರವಾಡ | ವಿದ್ಯಾವರ್ಧಕ ಸಂಘಕ್ಕೆ ರಾಜಕೀಯ ವ್ಯಕ್ತಿಗಳ ಪ್ರವೇಶ ಬೇಡ; ಸಾಹಿತಿಗಳೇ ಅಧ್ಯಕ್ಷರಾಗಲಿ: ರಾಯರ

ಜಾತ್ರಾ ಸಂದರ್ಭದಲ್ಲಿ ಮುಸಲ್ಮಾನರು ಮಸೀದಿಗೆ ಬಣ್ಣ ಹಚ್ಚುತ್ತಾರೆ. ಮತ್ತು ತಮ್ಮ ಬಂಧು ಬಳಗವನ್ನು ಜಾತ್ರೆಗೆ ಆಹ್ವಾನಿಸುತ್ತಾರೆ. ಹೊನ್ನಾಟದ ವೇಳೆ ಗ್ರಾಮದ ಜುಮ್ಮಾ ಮಸೀದಿ ಎದುರು 200ಕ್ಕೂ ಹೆಚ್ಚು ಮುಸ್ಲಿಮರು ಜಮಾಯಿಸಿದ್ದರು. ನಂತರ ದೇವಿಯರ ಹೊತ್ತು ಗ್ರಾಮದ ಮುಖ್ಯ ಬೀದಿಯಲ್ಲಿ ಡೊಳ್ಳು ಬಾರಿಸುತ್ತ, ದೇವಿಯ ಉಡಿ ತುಂಬುವ ಸಾಮಗ್ರಿ ತೆಗೆದುಕೊಂಡು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...