ಧಾರವಾಡ | ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯೊಂದಿಗೆ ಬದಲಾವಣೆ ತರುವುದು ಅಗತ್ಯ: ಆರ್‌ ವಿ ದೇಶಪಾಂಡೆ

Date:

ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಯೊಂದಿಗೆ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಹೇಳಿದರು.

- Advertisement -

ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

“ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿ ಆಗಿದ್ದಾಗ ಮಾತ್ರ ಸರ್ಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ. ಕಲ್ಯಾಣ ರಾಜ್ಯ ಕಟ್ಟುವುದು ಇಂದಿನ ಸರ್ಕಾರಗಳ ಗುರಿ. ಆಡಳಿತವು ಪಾರದರ್ಶಕವಾಗಿ ಮತ್ತು ಜನಸ್ನೇಹಿಯಾಗಿದ್ದರೆ ಮಾತ್ರ ಇದು ಸಾಧ್ಯವಾಗುತ್ತದೆ. ಆಡಳಿತ ವ್ಯವಸ್ಥೆ ಸರಳವಾಗಿದ್ದರೆ ಜನರಿಗೆ ಸರ್ಕಾರಿ ಯೋಜನೆಗಳ ಲಾಭ ಬೇಗ ತಲುಪುತ್ತದೆ” ಎಂದರು.

“ಇಂದಿನ ಸರ್ಕಾರಗಳು ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಜನರ ದಿನನಿತ್ಯದ ಜೀವನಮಟ್ಟ ಸುಧಾರಣೆಗೆ ಹೆಚ್ಚು ಒತ್ತು ನೀಡುತ್ತಿವೆ. ಸಕಾಲ ಕಾಯ್ದೆ ಅನುಷ್ಠಾನಕ್ಕೆ ಬಂದಿದ್ದರೂ ಅನೇಕ ಯೋಜನೆಗಳಲ್ಲಿ ಅನಗತ್ಯ ದಾಖಲಾತಿಗಳ ಗೊಂದಲದಿಂದಾಗಿ ವಿಳಂಬವಾಗುತ್ತಿವೆ. ಇದಕ್ಕೆ ಆಡಳಿತದ ವಿವಿಧ ಹಂತಗಳಲ್ಲಿ ಬದಲಾವಣೆ ಅಗತ್ಯವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯನವರೇ ಮುಂದುವರೆಯುತ್ತಾರೆ: ಆರ್ ವಿ ದೇಶಪಾಂಡೆ

“ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಕೆಲವು ಇಲಾಖೆಗಳಲ್ಲಿ ಕಾರ್ಯಬಾರ ಕಡಿಮೆ ಇರುವ ಹುದ್ದೆಗಳು ಮುಂದುವರಿದಿರುವುದರಿಂದ ಕೆಲವು ಸಲ ಆಡಳಿತದಲ್ಲಿ ವಿಳಂಬತೆ, ನಿಧಾನಗತಿ ಕಾಣಿಸುತ್ತದೆ. ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡುವ ಜತೆಗೆ, ಈಗಾಗಲೇ ಕೆಲವು ಇಲಾಖೆಗಳಲ್ಲಿ ಹೆಚ್ಚುವರಿ ಆಗಿರುವ ಹುದ್ದೆಗಳನ್ನು ರದ್ದುಪಡಿಸುವ ಬಗ್ಗೆಯೂ ಮಾಹಿತಿ ನೀಡಬೇಕು. ಈ ಎಲ್ಲ ಮಾಹಿತಿಯುಳ್ಳ ಅಧಿಕಾರಿಗಳ ಅಭಿಪ್ರಾಯವೂ ಆಡಳಿತ ಸುಧಾರಣೆಯಲ್ಲಿ ಮುಖ್ಯವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...