ಧಾರವಾಡ | ಅನ್ಯಾಯ, ಅತ್ಯಾಚಾರದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ: ಅಕ್ಷತಾ ಕೆ ಸಿ

Date:

ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ನಾವು ಖಂಡಿಸಬೇಕಿದೆ ಎಂದು ಸಾಮಾಜಿಕ, ರಾಜಕೀಯ, ಮಾನವ ಹಕ್ಕುಗಳ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಷತಾ ಕೆ ಸಿ ಹೇಳಿದರು.

- Advertisement -

ಧಾರವಾಡದ ನವನಗರದ ಚನ್ನಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶೇಷ ಉಪನ್ಯಾಸ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಬಾಬಾಸಾಹೇಬ್ ಅಂಬೇಡ್ಕರ್ ಅವರು ಮಹಿಳೆಯರ ಪರವಾಗಿ ಹೋರಾಡಿದ ವ್ಯಕ್ತಿ. ಆದರೆ, ಮಹಿಳೆಯರಿಗೆ ಇನ್ನೂ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ನ್ಯಾಯ ಸಿಗದೇ ಇರುವುದು ವಿಷಾದನೀಯ. ಇಂದಿಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ಖಂಡಿಸಬೇಕಿದೆ. ನಮ್ಮ ದೇಶದ ಮಹಿಳೆಯರಿಗೆ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಚಂದ್ರಶೇಖರ ಕಂಬಾರ ದತ್ತಿ, ನಾಗಮ್ಮ ಈರಪ್ಪ ಅಳಗುಂಡಗಿ ದತ್ತಿ, ದತ್ತಾತ್ರೇಯ ಕೃಷ್ಣಾಜಿ ಕುಲಕರ್ಣಿ ದತ್ತಿ ಹಾಗೂ ಶಾಂತಾ ರಾಮಚಂದ್ರ ನಾಡಗೇರ ದತ್ತಿ, ಅಕ್ಷತಾ ಕೆ ಸಿ ಅವರು ಲಿಂಗ ತಾರತಮ್ಯ ಹಾಗೂ ಸಮಾಜದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಡಾ. ಲಿಂಗರಾಜ ಅಂಗಡಿ, ʼಮಹಿಳಾ ಪರ ಸಂಘಟನೆಗಳು ಮಹಿಳಾ ಜಾಗೃತಿಗಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳಬೇಕುʼ ಎಂದರು. ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಉಮಾ ಚಂದ್ರಶೇಖರ ಅಳಗುಂಡಗಿ ದಿ. ವಿ ಐ ಅಳಗುಂಡಗಿಯವರ ಹೆಸರಿನಲ್ಲಿ 25000 (ಇಪ್ಪತೈದು ಸಾವಿರ) ದತ್ತಿ ನಿಧಿ ಸ್ಥಾಪನೆ ಮಾಡಲು ಹೇಳಿದರು. ಬಳಿಕ ಅಕ್ಷತಾ ಕೆ ಸಿ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಧಾರವಾಡ | ಕೊಳತೆ ಸ್ಥಿತಿಯಲ್ಲಿ ಮೃತ ದೇಹ ಪತ್ತೆ ಪ್ರಕರಣ: ಆರೋಪಿಗಳಿಬ್ಬರ ಬಂಧನ

ಕಾರ್ಯಕ್ರಮದಲ್ಲಿ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್ ಎಸ್ ಹೊಸೂರ, ಪ್ರೊ. ಕೆ ಎಸ್ ಕೌಜಲಗಿ, ಪ್ರೊ.ಪರಶುರಾಮ ಕೆಂಗಾರ, ಎಸ್ ಕೆ ಆದಪ್ಪನವರ, ಆರ್ ಟಿ ಅಣ್ಣಿಗೇರಿ, ಶಾಂತಾ ನಾಡಿಗೇರ, ಮಂಜುಳಾ ದತ್ತಾತ್ರೇಯ ಕುಲಕರ್ಣಿ, ಪದ್ಮಜಾ ಉಮರ್ಜಿ, ಸಂಧ್ಯಾ ದಿಕ್ಷೀತ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಕೆ ಎಸ್ ಕಬ್ಬೂರ, ಸೋಮಶೇಖರ್ ಇಟಗಿ, ಸುಮಂಗಲಾ ಅಂಗಡಿ, ಜಯಶ್ರೀ ಧಾರವಾಡ ಶೆಟ್ಟರ್,‌ ಎಸ್ ಎಸ್ ಕರಡಿ, ಕು.ನೇತ್ರಾವತಿ ಕುರುಬರ, ಕು.ಗಂಗಮ್ಮ ಶ್ಯಾಗೋಟಿ, ಚನ್ನಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...