ಧಾರವಾಡ | ಅಧಿಕಾರಿಗಳ ನಿರ್ಲಕ್ಷ್ಯ: ಕೆಟ್ಟಿರುವ ಸ್ಥಿತಿಯಲ್ಲೇ ಬಾಕಿಯಾದ ಶುದ್ಧ ಕುಡಿಯುವ ನೀರಿನ ಘಟಕ

Date:

ಧಾರವಾಡ ತಾಲೂಕಿನ ಮನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 6 ತಿಂಗಳಿಂದ ದುರಸ್ತಿಗೆ ಬಂದಿದ್ದು, ನೀರು ಬಾರದೆ ಬಂದ್ ಆಗಿದೆ. ಗ್ರಾಮದಲ್ಲಿ ಒಟ್ಟು ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಬಸ್ ನಿಲ್ದಾಣದ ಪಕ್ಕದಲ್ಲಿರುವ ನೀರಿನ ಘಟಕವು ಬಂದ್ ಆಗಿ ಸ್ಥಳೀಯರಿಗೆ ಸಮಸ್ಯೆ ಉಂಟಾಗಿದೆ. ಹಾಗೆಯೇ ಗ್ರಾಮದಲ್ಲಿ ಹೇಳಿಕೊಳ್ಳುವಷ್ಟು ಏನೂ ಅಭಿವೃದ್ದಿ ಇನ್ನೂ ಆಗಿಲ್ಲ. ಇದಕ್ಕೆಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ದೂರುಗಳು ಕೇಳಿಬಂದಿದೆ.

- Advertisement -

ಧಾರವಾಡ ಜಿಲ್ಲೆಯಲ್ಲಿ ಒಟ್ಟು 467 ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 111 ಕ್ಕೂ ಹೆಚ್ಚು ನೀರಿನ ಘಟಕಗಳು ಬಂದ್ ಆಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆಗಳು ಕ್ರಮೇಣ ಹೆಚ್ಚಾಗಿವೆ. ಧಾರವಾಡ ತಾಲೂಕಿನಲ್ಲೇ ಒಟ್ಟು 103 ನೀರಿನ ಘಟಕಗಳಿವೆ. ಅದೆಷ್ಟೋ ಘಟಕಗಳು ಕದ ಮುಚ್ಚಿದ್ದು, ಅದರಲ್ಲಿ ಮನಸೂರು ಗ್ರಾಮದ ನೀರಿನ ಘಟಕವೂ ಒಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗಳ ನಿರ್ಲಕ್ಷ್ಯವೇ ಇದ್ದಕ್ಕೆಲ್ಲ‌ ಕಾರಣವಾಗಿದೆ. ಆದ್ಧರಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗೂ ಒಬ್ಬ ಖಾಯಂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅನ್ನು ನೇಮಿಸಬೇಕು ಎಂದು ಪಂಚಾಯತ್ ಸಿಬ್ಬಂದಿಗಳು ಒತ್ತಾಯಿಸುತ್ತಾರೆ.

IMG 20241005 WA1863

ಧಾರವಾಡ ನಗರದಿಂದ 8 ಕಿ.ಮೀ ದೂರದಲ್ಲಿರುವ ಮನಸೂರು ಗ್ರಾಮವು, ಸಂಗೀತ ಕ್ಷೇತ್ರದ ದಿಗ್ಗಜ ಮಲ್ಲಿಕಾರ್ಜುನ‌ ಮನಸೂರು ಅವರ ಹುಟ್ಟೂರು. ಆದರೆ ಅವರ ಗುರುತು ಹೇಳಿಕೊಳ್ಳುವ ಯಾವುದೇ ಅಭಿವೃದ್ಧಿ ಕಾರ್ಯಯೂ ಈ ಗ್ರಾಮದಲ್ಲಿ ನಡೆದಿಲ್ಲ. ಗ್ರಾಮಸ್ಥರಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನುತ್ತಾರೆ ಕೆಲವರು.

ಸದ್ಯ ಹಾಲಿ ಪಂಚಾಯತ್ ಉಪಾಧ್ಯಕ್ಷರ ಓಣಿಯಲ್ಲಿಯೇ ರಸ್ತೆ ಕೆಟ್ಟಿದ್ದು, ಈ ಕುರಿತು ಗ್ರಾಮದ ಅಭಿವೃದ್ಧಿಗೆ ಕ್ರಿಯಾ ಯೋಜನೆ ಆಗಿದ್ದರೂ, ಅನುಷ್ಠಾನಗೊಂಡಿಲ್ಲ. ಪಂಚಾಯತಿಯಲ್ಲಿ ಅಧ್ಯಕ್ಷೆ ಕೂಡ ಗ್ರಾಮದ ಅಭಿವೃದ್ಧಿಯ ವಿಚಾರದಲ್ಲಿ ಏನೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಗ್ರಾಮದ ಶುದ್ಧ ನೀರಿನ ಘಟಕ ಕೆಟ್ಟು 6 ತಿಂಗಳುಗಳೇ ಕಳೆದಿವೆ. ಸಂಬಂಧಪಟ್ಟ ಎಂಜಿನಿಯರ್ ಈ ಬಗ್ಗೆ ಇಂದಿಗೂ ತಲೆಕೆಡಿಸಿಕೊಂಡಿಲ್ಲ. ಫಿಲ್ಟರ್ ಮಷೀನಿನ ಸುತ್ತಲೂ ವಿದ್ಯುತ್ ಆವರಿಸಿಕೊಂಡಿದ್ದು, ಯಾರೂ ಒಳಗೆ ಹೋಗದ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕ ಮಕ್ಕಳನ್ನು ಅತೀ ಜಾಗರೂಕತೆಯಿಂದ ಸ್ಥಳೀಯರು ನೋಡಿಕೊಳ್ಳುವ ಅನಿವಾರ್ಯತೆ ಬಂದಿದೆ. ಆದಷ್ಟು ಬೇಗ ರಿಪೇರಿ ಮಾಡಿಸಿ, ಸ್ಥಳಿಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯತ್ ಹಿರಿಯ ಸದಸ್ಯ ನಿಂಗಪ್ಪ ಯಲ್ಲಪ್ಪ ತೇಗೂರ್ ಹೇಳುತ್ತಾರೆ.

ಇದನ್ನು ಓದಿದ್ದೀರಾ? ಪ್ಯಾಲೆಸ್ತೀನ್ ಜನರಿಗಾಗಿ ಒಗ್ಗೂಡಿದ ಬೆಂಗಳೂರಿನ ಜನ

ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಯ ಬೇಜವಾಬ್ದಾರಿತನದಿಂದ ಈ ನೀರಿನ ಘಟಕ ಬಂದ್ ಆಗಿದೆ. ಸರಕಾರದ ಆಸ್ತಿ ಎಂದರೆ ಹೀಗೆಯೋ, ಏನೋ ಗೊತ್ತಾಗುತ್ತಿಲ್ಲ. ಸಾರ್ವಜನಿಕರಿಗೂ ಸದುಪಯೋಗ ಆಗುವುದಿಲ್ಲ ಎಂದರೆ, ಅಂತಹ ಯೋಜನೆಯನ್ನಾದರೂ ಜಾರಿ ಮಾಡುವುದೇಕೆ? ಈ ಮೊದಲು ರಿಪೇರಿ ಬಂದಾಗ, ಕಡಿಮೆ ಬೆಲೆಯ ಮೆಮರಿನ್ ಮೆಷಿನ್ ಹಾಕಿಸಿರುವ ಕಾರಣ, ಅದು ಹೆಚ್ಚು ಕಾಲ‌ ಬಳಕೆಗೆ ಬರಲಿಲ್ಲ. ಅದಕ್ಕೇ ಹೊಸ ಬಿಲ್ ತೆಗೆದು ಅಧಿಕಾರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಿಲ್ಲೆಯ ಎಲ್ಲ ಕಡೆಗೆ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸಿ, ಅಧಿಕಾರಿಗಳು ಸಾರ್ವಜನಿಕರಿಗೆ ಅನುಕೂಲ ಮಾಡುತ್ತಾರೆಯೇ? ಕಾದುನೋಡಬೇಕಿದೆ.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....