ಧಾರವಾಡ | ಅಧಿಕಾರಿಗಳು ಮೂಲಭೂತ ಸೌಕರ್ಯ, ಅಭಿವೃದ್ಧಿಗೆ ಆದ್ಯತೆ ನೀಡಬೇಕು: ಡಿಸಿ ದಿವ್ಯ ಪ್ರಭು

Date:

ಜಿಲ್ಲಾ ಅಭಿವೃದ್ಧಿಯ ಯೋಜನಾ ವರದಿಯನ್ನು ರೂಪಿಸುವಾಗ ಗ್ರಾಮೀಣ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳ ಯೋಜನೆಗಳನ್ನು ಸಮನ್ವಯಗೊಳಿಸಬೇಕು. ಮತ್ತು ಸ್ಥಳೀಯ ಅವಶ್ಯಕತೆಗಳು, ಮೂಲಭೂತ ಸೌಕರ್ಯ, ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.

- Advertisement -

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ 2026-27 ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು ಜರುಗಿದ ಪುನರ್ ಮನನ ಕಾರ್ಯಾಗಾರ ಉದ್ದೇಶಿಸಿ, ಮಾತನಾಡುತ್ತಾ, ಭವಿಷ್ಯತ್ತಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಅಧಿಕಾರಿಗಳು ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗಾಗಿ ಗ್ರಾಮ ಹಾಗೂ ಕ್ಷೇತ್ರಮಟ್ಟದ ಮೂಲಬೇಡಿಕೆಗಳಿಗೆ ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನೆಯಲ್ಲಿ ಆದ್ಯತೆ ನೀಡಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಾರ್ಷಿಕ ಅಭಿವೃದ್ಧಿ ಯೋಜನಾ ವರದಿಯಲ್ಲಿ ಗ್ರಾಮಸ್ಥರ ಹಾಗೂ ನಗರವಾಸಿಗಳ ಆಶೋತ್ತರಗಳನ್ನು ಒಳಗೊಂಡಿರಬೇಕು. ಆದರೆ ಯೋಜನೆಗಳು ಪ್ರತಿರೂಪವಾಗದಂತೆ ಎಚ್ಚರಿಕೆ ವಹಿಸಬೇಕು. ಲಭ್ಯವಾಗಿರುವ ಅನುದಾನವನ್ನು ಗಮನಿಸಿ, ಯೋಜನೆಗಳನ್ನು ರೂಪಿಸಬೇಕು. ಮುಖ್ಯವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಕೃಷಿಗೆ ಪೂರಕವಾದ ಇಲಾಖೆಗಳು ಸಮಾಜ ಕಲ್ಯಾಣ, ಕ್ರೀಡೆ ಹೀಗೆ ಮುಖ್ಯವಾದ ಇಲಾಖೆಗಳ ಆಶಯಗಳನ್ನು ಪ್ರತಿನಿಧಿಸುವಂತೆ ರೂಪಿಸಬೇಕು. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಮತ್ತು ಪಟ್ಟಣ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ ಒಳಗೊಂಡಂತೆ ಎಲ್ಲ ಹಂತದ ನಗರ ಸ್ಥಳೀಯ ಸಂಸ್ಥೆಗಳ ಬೇಡಿಕೆಗಳನ್ನು ಪ್ರತಿನಿಧಿಸುವಂತೆ ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನಾ ವರದಿಯನ್ನು ರೂಪಿಸಬೇಕೆಂದು ಹೇಳಿದರು.

ಜಿಲ್ಲಾ ಯೋಜನಾ ಸಮಿತಿಯ ಸದಸ್ಯಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಗ್ರಾಮದ ಬೇಡಿಕೆಗಳ ಪಟ್ಟಿಯನ್ನು ತಯ್ಯಾರಿಸಿ, ತಾಲೂಕು ಹಂತದಲ್ಲಿ ಮತ್ತು ಜಿಲ್ಲಾ ಹಂತದಲ್ಲಿ ಪರಿಶೀಲಿಸಿ ಸೇರ್ಪಡೆಗೊಳಿಸಲು ಕ್ರಮವಹಿಸಬೇಕು. ಕ್ರೂಢಿಕರಿಸಲಾದ ಪ್ರಸ್ತಾವನೆಗಳನ್ನು ಕಾರ್ಯಕ್ರಮಗಳು ಹಾಗೂ ಕಾಮಗಾರಿಗಳನ್ನಾಗಿ ವಿಗಂಡಿಸಿ, ಇಲಾಖಾವಾರು ರೂಪಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯತಿಗಳು, ವಾರ್ಡ್ ಸಭೆಗಳ ಮೂಲಕ ಅಗತ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಾಸ್ತಾವನೆಯನ್ನು ಮತ್ತು ಸ್ವೀಕೃತ ಪ್ರಸ್ತಾವನೆಗಳನ್ನು ಇಲಾಖಾವಾರು ವಿಗಂಡಿಸಿ, ಪ್ರತ್ಯೇಕ ಅನುಬಂಧಗಳನ್ನು ಮಾಡಿಕೊಳ್ಳಬೇಕು. ಅವುಗಳನ್ನು ಗ್ರಾಮ ಪಂಚಾಯತ ಸಮಿತಿ ಸಭೆಯಲ್ಲಿ ಮಂಡಿಸಿ, ನವೆಂಬರ್ 3 ರೊಳಗೆ ಅನುಮೋದನೆ ಪಡೆದು ತಾಲೂಕು ಪಂಚಾಯತಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ತಾಲೂಕಾ ಯೋಜನಾ ಮತ್ತು ಅಭಿವೃದ್ಧಿ ಸಮಿತಿ ರಚಿಸಿ, ಗ್ರಾಮ ಪಂಚಾಯತ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಕ್ರೂಢಿಕರಿಸಿ, ತಾಲೂಕು ಯೋಜನಾ ಮತ್ತು ಅಭಿವೃದ್ಧಿ ಸಮಿತಿಯಿಂದ ಅನುಮೋದನೆ ಪಡೆದು ಜಿಲ್ಲಾ ಪಂಚಾಯತಿಗೆ ನವೆಂಬರ್ 7 ರೊಳಗೆ ಸಲ್ಲಿಸಬೇಕು. ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸಿ, ತಾಲೂಕಾ ಪಂಚಾಯತ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯನ್ನು ಕ್ರೂಢಿಕರಿಸಿ, ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆದು ನವೆಂಬರ್ 15 ರೊಳಗೆ ಸರ್ಕಾರಕ್ಕೆ ಸಲ್ಲಿಸಲು ಕ್ರಮವಹಿಸಬೇಕೆಂದು ಸೂಚಿಸಿದರು.

ವೇದಿಕೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ ಇದ್ದರು. ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸ್ವಾಗತಿಸಿ, ಪ್ರಾತ್ಯಕ್ಷಿಕೆಯ ಮೂಲಕ ಕಾರ್ಯಾಗಾರ ನಿರ್ವಹಿಸಿದರು. ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಾರುತಿ ತಳವಾರ ವಂದಿಸಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...