ಧಾರವಾಡ | ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು: ಸಚಿವ ಸಂತೋಷ್ ಲಾಡ್

Date:

Advertisements

ಅವಳಿ ನಗರಗಳ ಬೆಳವಣಿಗೆಗೆ ಅಧಿಕಾರಿಗಳು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಲು ಮುಂದಾಗಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಸೂಚಿಸಿದರು.

ಹುಬ್ಬಳ್ಳಿಯ ಐಟಿ ಪಾರ್ಕ್‌‌ನಲ್ಲಿರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡರು.

“ಬೆಂಗಳೂರು ನಗರದಂತೆ ಹುಬ್ಬಳ್ಳಿ ಧಾರವಾಡ ನಗರಗಳು ಬೆಳವಣಿಗೆ ಹೊಂದುತ್ತಿವೆ. ಹೀಗಾಗಿ ಅವಳಿ ನಗರಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ 25 ವರ್ಷಗಳಲ್ಲಿ ನಗರಗಳನ್ನು ಬೆಳವಣಿಗೆ ಮಾಡಲು ಉತ್ತಮ ಯೋಜನೆಗಳನ್ನು ರೂಪಿಸಬೇಕಿದೆ” ಎಂದರು.

WhatsApp Image 2024 08 28 at 10.38.00 PM

ಆಧುನಿಕ ವಿಜ್ಞಾನ ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಲು ಯತ್ನಿಸಬೇಕು. ಆನ್‌‌ಲೈನ್ ವ್ಯವಸ್ಥೆ, ಹೊಸ ತಂತ್ರಜ್ಞಾನ ಮತ್ತು ನವೀನ ಕಲ್ಪನೆಯ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಮೂಲ‌ ಸೌಕರ್ಯಗಳನ್ನು ಒದಗಿಸುವುದು, ಘನ ತ್ಯಾಜ್ಯ ನಿರ್ವಹಣೆ ಘಟಕಗಳಿಗೆ ಕಾಂಪೌಂಡ್ ನಿರ್ಮಾಣ, ಸರ್ಕಾರಿ ಉದ್ಯಾನಗಳನ್ನು ಕೈಗಾರಿಕೋದ್ಯಮಿಗಳು ಹಾಗೂ ಎನ್‌‌ಜಿಒಗಳಿಗೆ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಬೇಕಿದೆ ಎಂದರು.

ಬಿಲ್ ಕಲೆಕ್ಟರ್ ಗಳು ವಲಯವಾರು ಆಸ್ತಿಗಳನ್ನು ಸರಿಯಾಗಿ ಗುರುತಿಸಿ, ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಪಾಲಿಕೆ ವ್ಯಾಪ್ತಿಯ ಆಸ್ತಿ‌ಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕ್ರೋಢೀಕರಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಮಹಾಪೌರರಾದ ರಾಮಣ್ಣ ಬಡಿಗೇರ, ಉಪಮಹಾಪೌರರಾದ ದುರ್ಗಮ್ಮ ಬೀಜವಾಡ, ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X