ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏ.14ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಲೇಖನಕ್ಕಾಗಿ ಕರ್ನಾಟಕ ವಿವಿ ಆಹ್ವಾನ ನೀಡಿದೆ.
ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಾಮಾಜಿಕ ನ್ಯಾಯ ಹಾಗೂ ಭಾರತದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ರವರ ದೃಷ್ಟಿಕೋನಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಏಪ್ರಿಲ್ 14,2024ರಂದು ಕವಿವಿ ಸುವರ್ಣ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.
ಕನ್ನಡ ಚಲನಚಿತ್ರದ ಹಿರಿಯ ನಟ ಅಶೋಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಹಾಗೂ ದಲಿತ ಸಹಿತಿ ಹಾಗೂ ಕವಿಗಳಾದ ಸುಬ್ಬು ಹೊಲೆಯರ ಅವರು ಕಾರ್ಯಕ್ರಮದಲ್ಲಿ ಆಶಯ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಅವರು ಅಧ್ಯಕ್ಷೆತೆಯನ್ನು ವಹಿಸುವರು. ಕವಿವಿ ಕುಲಸಚಿವ ಡಾ.ಏ.ಚನ್ನಪ್ಪ, ಕವಿವಿ ಮೌಲ್ಯಮಾಪನ ವಿಭಾಗದ ಪ್ರೊ.ಎನ್.ವೈ.ಮಟ್ಟಿಹಾಳ, ಕವಿವಿ ಹಣಕಾಸು ಅಧಿಕಾರಿ ಪ್ರರೋ.ಸಿ.ಕೃಷ್ಣಮೂರ್ತಿ ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಅನೇಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಕವಿವಿ ವಿವಿಧ ನಿಖಾಯ ಡಿನರ್, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇರಲಿದ್ದಾರೆ.
ವಿಶೇಷ ಲೇಖನಕ್ಕಾಗಿ ಆಹ್ವಾನ : ಈ ವಿಚಾರ ಸಂಕಿರಣಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ವಿಚಾರಗಳ ಕುರಿತಾದ ಲೇಖನಗಳನ್ನು ಆಹ್ವಾನಿಸಲಾಗಿದೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಲೇಖನಗಳನ್ನು Dr.b.r.ambedkar130@gmail.com ಕಳಿಸಬಹುದು.
