ಧಾರವಾಡ | ಒನಕೆ ಓಬವ್ವ ಒಂದು ಜಾತಿಗೆ ಸೀಮಿತವಲ್ಲ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

Date:

Advertisements

ರಾಜರು ತಮ್ಮ ಸೇನಾ ಬಲದಿಂದ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರಿ ಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ. ಒನಕೆ ಓಬವ್ವಳು, ಯಾವುದೇ ಒಂದು ಜಾತಿ ಸಮುದಾಯಕ್ಕೆ ಮಾತ್ರ ಸಿಮೀತವಲ್ಲ ಎಂದು ಧಾರವಾಡದ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ‘ವೀರವನಿತೆ ಒನಕೆ ಓಬವ್ವ’ ಜಯಂತಿ ಅಂಗವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಮಕ್ಕಳಿಗೆ ವೀರವನಿತೆ ಓಬವ್ವಳ ಬಗ್ಗೆ ತಿಳಿಸಬೇಕು. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ನಾಮಕರಣ ಮಾಡಿ, ಗೌರವಿಸಲಾಗಿದೆ. ಓಬವ್ವ ಒಬ್ಬ ಕೋಟೆ ಕಾವಲುಗಾರನ ಹೆಂಡತಿಯಾಗಿ, ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಹೋರಾಡಿ, ಮಹಿಳೆಯರ ಸಾಧನೆಗೆ ಪ್ರೇರಕಳಾಗಿದ್ದಾಳೆ. ಅವಳ ಗುಣ, ಸಾಹಸಗಳು ನಮಗೆಲ್ಲ ಮಾದರಿ ಎಂದರು.

Advertisements

ಕವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಸ್.ಜಿ. ಛಲವಾದಿ ಒನಕೆ ಓಬವ್ವನ ಜೀವನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅಥಿತಿಗಳ ಪರಿಚಯ ಮಾಡಿದರು. ರವಿ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ವರದಿ ಓದಿದ್ದೀರಾ? ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಯಲ್ಲಪ್ಪ ಮಂಟೂರು, ದೇವಾನಂದ ರತ್ನಾಕರ, ರವಿ ಸಾಂಬ್ರಾಣಿ ಹಾಗೂ ಇಂದುಮತಿ ಶಿರಗಾಂವಿ, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X