ಧಾರವಾಡ | ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ: ಡಾ. ಶಶಿ ಪಾಟೀಲ

Date:

ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.

ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಲಕಲ್ಲ ಡಾ‌. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕ ದ್ರವ್ಯ, ತಂಬಾಕುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರು ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ, ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷವೂ ಆಗಸ್ಟ್ 1ರಂದು ಲಿಂಗೈಕ್ಯ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕರ್ನಾಟಕ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈಸೂರು | ಗಾಂಜಾ ಮತ್ತಿನಲ್ಲಿ ಯುವಜನರ ಅಸಭ್ಯ ವರ್ತನೆ; ಎಸ್‌ಪಿ, ಅರಣ್ಯ ಇಲಾಖೆ ಅಲರ್ಟ್‌

ಕರ್ನಾಟಕ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಡಿ ಬಿ ಕರಡೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆಯ ಮನೋವೈದ್ಯೆ ಡಾ ವೈಶಾಲಿ ಎನ್ ಹೆಗಡೆ, ಕವಿವಿ ಎನ್‌ಎಸ್‌ಎಸ್‌ ಕೋಶದ ಸಂಯೋಜನಾಧಿಕಾರಿ ಡಾ. ಎಂ ಬಿ ದಳಪತಿ, ಕೆಸಿಡಿ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಡಾ. ಎಚ್ ಕೆ ಕೋಳೂರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...