ಹಿಟ್ & ರನ್ ಮಾಡಿದ ಪರಿಣಾಮ ಡಿಆರ್ ಎಎಸ್‌ಐ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಹೆದ್ದಾರಿಯಲ್ಲಿ ನಡೆದಿದೆ.
ಡಿಆರ್ ಎಎಸ್‌ಐ ಯಲ್ಲಪ್ಪ ಕುಂಬಾರ ಮೃತ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯಲ್ಲಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಧಾರವಾಡ | ಬುದ್ಧನ ಅಷ್ಟಾಂಗ ಮಾರ್ಗದಿಂದ ಪರಿವರ್ತನೆ ಸಾಧ್ಯ: ಡಾ. ಸಂಜೀವ ಕುಲಕರ್ಣಿ