ಧಾರವಾಡ | ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ

Date:

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.

- Advertisement -

ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿ, ಧಾರವಾಡ ಹೊರತಾಗಿ ಇತರ ತಾಲೂಕು ಕೇಂದ್ರಗಳಲ್ಲಿ ಇಂದಿರಾ ‌ ಕ್ಯಾಂಟೀನ್ ಇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈಗ, ಹುಬ್ಬಳ್ಳಿ ನಗರದಲ್ಲಿ ಎರಡು, ಕಲಘಟಗಿ, ಅಳ್ನಾವರ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ಪಟ್ಟಣದಲ್ಲಿ ತಲಾ ಒಂದು ಕ್ಯಾಂಟೀನ್ ತೆರೆಯಲು ಯೋಜಿಸಲಾಗಿದೆ. ಇಂದಿರಾ ಕ್ಯಾಂಟೀನ್ ನಿರ್ಮಾಣದ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ನಿವೇಶನ ಗುರುತಿಸಿ ಕೇಂದ್ರ ಕಚೇರಿಗೆ ವಿವರ ಸಲ್ಲಿಸಿವೆ.

ರಾಜ್ಯದಲ್ಲಿ ಹೊಸದಾಗಿ 185 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜನವರಿ 2ರಂದು ಮಂಜೂರಾತಿ ಆದೇಶ ಹೊರಡಿಸಿತ್ತು.

ಇಂದಿರಾ ಕ್ಯಾಂಟೀನ್‌ನಲ್ಲಿ 5ರೂ.ಗೆ ಉಪಹಾರ, 10ರೂ.ಗೆ ಊಟ ದೊರೆಯುತ್ತದೆ. ಬೇರೆ ಊರುಗಳಿಂದ ಬರುವ ಜನರು, ವಿದ್ಯಾರ್ಥಿಗಳು ಈ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸುತ್ತಾರೆ. ಕಡಿಮೆ ದರದಲ್ಲಿ ಆಹಾರ ಸಿಗುವುದು ಅನುಕೂಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

ಇದನ್ನು ಓದಿದ್ದೀರಾ? ಎನ್‌ಡಿಎ ಗೆಲ್ಲುತ್ತದೆ ಎಂಬ ಸಮೀಕ್ಷೆಗಳಲ್ಲಿ ತಪ್ಪುಗಳಿವೆ; ವಾಸ್ತವದ ಬೆಳಕಿನಲ್ಲಿ ನೋಡುವ ಅಗತ್ಯವಿದೆ

ಕ್ಯಾಂಟೀನ್‌ಗಾಗಿ ನಿವೇಶನ ವಿಸ್ತೀರ್ಣ, ಮಣ್ಣು ಪರೀಕ್ಷೆ ವರದಿ ಮೂಲಸೌಕರ್ಯಗಳ ಬಗ್ಗೆ ಕೇಂದ್ರ ಕಚೇರಿಗೆ ವರದಿಯನ್ನು ಸಲ್ಲಿಸಲಾಗಿದೆ. ಬೆಂಗಳೂರಿನಿಂದ ಎಂಜಿನಿಯರ್‌ಗಳು ಬಂದು ಸ್ಥಳಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಿದ್ದಾರೆ. ಸ್ಥಳಕ್ಕೆ ಅವರು ಒಪ್ಪಿಗೆ ನೀಡಿದರೆ, ಕಾಮಗಾರಿ ಆರಂಭಿಸಲು ಅನುಮೋದನೆ ಸಿಗುತ್ತದೆ ಎಂದು ಇಂದಿರಾ ಕ್ಯಾಂಟೀನ್ ನಿರ್ವಹಣೆ ಜಿಲ್ಲಾ ನೋಡೆಲ್ ಅಧಿಕಾರಿಯಾಗಿರುವ ಬಿ.ಎಸ್. ರಮೇಶ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...