ಧಾರವಾಡ | ಆಧಾರ್ ಸೇವಾ ಕೇಂದ್ರ ಸ್ಥಳಾಂತರ ಖಂಡಿಸಿ ಪ್ರತಿಭಟನೆ

Date:

ನಗರದಲ್ಲಿ ಆಧಾರ್ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದ ಸೌಲಭ್ಯ ಮುಂದುವರೆಸುವಂತೆ ಒತ್ತಾಯಿಸಿ ಧಾರವಾಡ ಧ್ವನಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಕಿತ್ತೂರ ಚೆನ್ನಮ್ಮ ಪಾರ್ಕ್ ಬಳಿಯ ಮಂಡಿ ಪ್ಲಾಜಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದರು. ಮಂಡಿ ಪ್ಲಾಜಾ ಕಟ್ಟಡದಲ್ಲಿ ಆಧಾರ್ ಸೇವಾ ಕೇಂದ್ರವು ಕಾರ್ಯನಿರ್ವಹಿಸುತ್ತಿತ್ತು. ಆದರೆ, ಆಧಾರ್ ಸೇವಾ ಕೇಂದ್ರವು ಕಳೆದ 2025ರ ನವಂಬರ್ 28 ರಿಂದ ದಿಢೀರ್ ಆಗಿ ಸ್ಥಗಿತಗೊಂಡು, ಇದೀಗ ಹುಬ್ಬಳ್ಳಿಯ ಕೇಶ್ವಾಪೂರಕ್ಕೆ ಸ್ಥಳಾಂತರಗೊಂಡಿದೆ. ಇದರಿಂದ ಧಾರವಾಡ ನಗರ, ಗ್ರಾಮೀಣ ಭಾಗ ಮಾತ್ರವಲ್ಲದೇ ಪಕ್ಕದ ತಾಲೂಕುಗಳ ಜನರು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ನಗರದಲ್ಲಿ ಅಂಚೆ ಕಚೇರಿ, ಕೆಲವು ಖಾಸಗಿ ಆನ್‌ಲೈನ್ ಕೇಂದ್ರಗಳಲ್ಲಿ ಅಧಾರ ಕಾರ್ಡ್ ಸಂಬಂಧಿತ ಸೇವೆಗಳು ಸಿಗುತ್ತಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಆಗಮಿಸುವ ಜನರಿಗೆ ಸಕಾಲದಲ್ಲಿ ಸೇವೆ ಲಭ್ಯವಾಗುತ್ತಿಲ್ಲ. ಅಲ್ಲದೇ ಸೇವೆಗೆ ಅಧಿಕ ದರ ನಿಗದಿಪಡಿಸಿರುವುದರಿಂದ ಜನಸಾಮಾನ್ಯರ ಸುಲಿಗೆಗೆ ಅವಕಾಶ ಸಿಕ್ಕಂತಾಗಿದೆ. ಆದ್ದರಿಂದ ಆಧಾರ್ ಕೇಂದ್ರ ಆರಂಭಿಸುವ ಅಗತ್ಯವಿದೆ. ವಿಳಂಬ ಮಾಡದೇ ಅಗತ್ಯ ಕ್ರಮ ಕೈಕೊಳ್ಳುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು. ಈ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಮನವಿಗೆ ಸ್ಪಂದಿಸಬೇಕು. ಒಂದು ವೇಳೆ ಶೀಘ್ರದಲ್ಲೇ ಇಲ್ಲಿವರೆಗೆ ಸೇವೆ ನೀಡುತ್ತಿದ್ದ ಪ್ರಮಾಣದ ಸೇವಾ ಕೇಂದ್ರ ಆರಂಭಿಸದಿದ್ದರೆ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಧಾರವಾಡ | ಮರ್ಯಾದೆಗೇಡು ಹತ್ಯೆ ನಿಷೇಧ ಕಾನೂನು ಜಾರಿಗೆ ಜನಪರ ಸಂಘಟನೆಗಳ ಒತ್ತಾಯ

ಈ ಸಂದರ್ಭದಲ್ಲಿ ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ, ಬಸವರಾಜ ಜಾಧವ, ಗೌರಮ್ಮ ಬರೋಗಿ, ಶಿವಾನಂದ ಕವಳಿ, ಮಂಜು ನಡೆಟ್ಟಿ, ಸಂತೋಷ ಪಟ್ಟಣಶೆಟ್ಟಿ, ಭೀಮಪ್ಪ ಕಾಸಾಯಿ, ಶರಣಗೌಡ ಗಿರಡ್ಡಿ, ವೆಂಕಟೇಶ ರಾಯ್ಕರ, ಬಸವರಾಜ ಪೊಮೋಜಿ, ಇಮ್ರಾನ್ ಪಾಳಿಕೋಟಿ, ಪರಮೇಶ್ವರ ಉಳಿವಣ್ಣವರ, ರಾಜೇಶ ಮನಗುಂಡಿ, ಶೇಖಪ್ಪ ಕಟ್ಟಿಮನಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...