ಧಾರವಾಡ | ಕಾರ್ಮಿಕ ವಿರೋಧಿ ಲೇಬರ್ ಕೋಡ್ ಜಾರಿ ವಿರೋಧಿಸಿ ಪ್ರತಿಭಟನೆ

Date:

ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಕಾರ್ಮಿಕ ಸಂಹಿತೆಗಳ ಜಾರಿಯನ್ನು ವಿರೋಧಿಸಿ ಇಂದು AIUTUC ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಭೆ ಮತ್ತು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ಲೇಬರ್ ಕೋಡ್ಗಳ ಸಾಂಕೇತಿಕ ಪ್ರತಿಯನ್ನು ಸುಡಲಾಯಿತು.

- Advertisement -

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ದೇವದಾಸ್ ಮಾತನಾಡಿ, ಉದ್ಯೋಗಿಗಳನ್ನು ವಜಾ ಮಾಡಲು ಅಥವಾ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರದ ಅನುಮತಿಯ ಅಗತ್ಯವಿರುವ ಸಂಸ್ಥೆಗಳ ಗಾತ್ರವನ್ನು ಹೆಚ್ಚಿಸಲಾಗಿದ್ದು ಇದರಿಂದ ಸುಲಭವಾಗಿ ಕಾರ್ಮಿಕರನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ. ಇದು ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತದೆ.
ಅಲ್ಲದೇ ​ಕಾರ್ಮಿಕರ ಪ್ರತಿಭಟನೆಯ ಹಕ್ಕನ್ನು ಮೊಟಕುಗೊಳಿಸುವುದು; ಕೈಗಾರಿಕಾ ಸಂಬಂಧಗಳ ಸಂಹಿತೆಯು ಮುಷ್ಕರ ನಡೆಸುವ ಹಕ್ಕನ್ನೇ ಕಸಿದುಕೊಳ್ಳುತ್ತದೆ. ಮತ್ತು ಕಾರ್ಮಿಕರ ಸಂಘಟಿತ ಚೌಕಾಸಿ (Collective Bargaining) ಶಕ್ತಿಯನ್ನು ದುರ್ಬಲಗೊಳಿಸುತ್ತದೆ, ಆದ್ದರಿಂದ ಈ ಲೇಬರ್ ಕೋಡ್ ಗಳು ಬಂಡವಾಳಶಾಹಿ ಗಳ ಪರ ಮತ್ತು ಕಾರ್ಮಿಕ ವಿರೋಧಿ ನೀತಿಗಳಾಗಿವೆ. ಕೂಡಲೇ ಈ ನೀತಿಯನ್ನು ರದ್ದು ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

​ಡಿ. ನಾಗಲಕ್ಷ್ಮಿ ಮಾತನಾಡಿ, ಕಾರ್ಮಿಕ ಹಕ್ಕುಗಳು ಕಾರ್ಮಿಕರ ತ್ಯಾಗ ಬಲಿದಾನಗಳಿಂದ ರೂಪಿತವಾಗಿದ್ದು ಅವುಗಳಲ್ಲಿ ಒಂದೇ ಏಟಿಗೆ ಮಾಲೀಕರ ಪರ ಮಾಡಿ ಕಾರ್ಮಿಕರಿಗೆ ಹಲ್ಲುಕ್ಕಿಂತ ಹಾವಿನಂತೆ ಮಾರ್ಪಾಡುಗೊಳಿಸಿ ಲೇಬರ್ ಕೋಡ್ ಜಾರಿಗೆ ತರಲಾಗಿದೆ. ಕಾರ್ಮಿಕರ ಕೆಲಸದ ಸಮಯವನ್ನು 8 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸಂಸ್ಥೆಗಳಿಗೆ ಅವಕಾಶ ನೀಡುವುದು, ಮಹಿಳೆಯರಿಗೆ ರಾತ್ರಿ ಪಾಳೆ ಜಾರಿ, ಫಿಕ್ಸ್ಡ್ ಟರ್ಮ್ ಎಂಪ್ಲಾಯ್ಮೆಂಟ್ ಇತ್ಯಾದಿಗಳೆಲ್ಲವೂ ಅತ್ಯಂತ ಕಾರ್ಮಿಕ ವಿರೋಧಿಯಾಗಿವೆ. ಇದರ ವಿರುದ್ಧ ದೇಶದಾದ್ಯಂತ ದುಡಿಯುವ ಜನತೆ ಬೀದಿಗಳಿದು ಪ್ರತಿಭತಿಸಬೇಕು ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ್, ಉಪಾಧ್ಯಕ್ಷೆ ಭುವನಾ ಬಳ್ಳಾರಿ, ಯೋಗಪ್ಪ ಜೋತೆಪ್ಪನವರ್, ಅಲ್ಲಾಭಕ್ಷ ಕಿತ್ತೂರ್, ಬಸವನಗೌಡ, ಗಿರಿಸಾಗರ್, ಶಾನ್ವಾಜ್ ಅಕ್ಕುರ್, ಚಂದ್ರು ಕಂಪ್ಲಿ ಕೊಪ್ಪ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...