ಧಾರವಾಡ | ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Date:

ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಕಲಾಭವನ ಮೈದಾನದಿಂದ ಜಿ.ಪಂ ಕಚೇರಿವರೆಗೆ ಸಾಗಿದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಹಗಲಿರುಳು ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆಗಳಿಗೆ ನಿಗದಿಯಾಗಿರುವ ಕೇಂದ್ರದ ಪ್ರೋತ್ಸಾಹಧನ, ಅವರ ಚಟುವಟಿಕೆಗಳನ್ನು ಆರ್‌ಸಿಎಚ್ ಪೋರ್ಟಲ್‌ಗೆ ಲಿಂಕ್ ಮಾಡಿರುವುದರಿಂದ ವೇತನ ಸಂಪೂರ್ಣವಾಗಿ ಸಿಗದೇ ಕಳೆದ ಐದಾರು ವರ್ಷಗಳಿಂದ ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೇ ಮೊಬೈಲ್ ಆಧಾರಿತ ಕೆಲಸಗಳ ಒತ್ತಡ, ಎನ್‌ಸಿಡಿ, ಎಸಿಎಫ್, ಟಿಬಿ ಸಂಬಂಧಿತ ಕೆಲಸಕ್ಕೆ ವರ್ಷಗಟ್ಟಲೆ ಪ್ರೋತ್ಸಾಹಧನ ನೀಡದಿರುವ ಇತ್ಯಾದಿ ಸಮಸ್ಯೆಗಳಿಂದ ಜಿಲ್ಲೆಯ ಆಶಾ ಕಾರ್ಯಕರ್ತೆಯರು ತತ್ತರಿಸಿದ್ದಾರೆ ಎಂದು ತಿಳಿಸಿದರು.

ಆಶಾ ಕಾರ್ಯಕರ್ತೆಯರಿಗೆ ನಿಗದಿ ಪಡಿಸಿದ ಕೆಲಸಗಳನ್ನು ಹೊರತು ಪಡಿಸಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಒತ್ತಾಯದಿಂದ ಬಳಸಿಕೊಳ್ಳುತ್ತಿರುವರು. ಈ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ತಳಹಂತದಿಂದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಸಮಸ್ಯೆಗಳನ್ನು ನೀಗಲು ಎಲ್ಲ ಆಶಾ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ರಾಜಿರಹಿತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆಕೊಟ್ಟರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ಜಿಲ್ಲೆಯಲ್ಲಿ ಜಿ.ಪಂ ಸಿಇಒ ಅಧ್ಯಕ್ಷತೆಯಲ್ಲಿ ಆಶಾಗಳ ಕುಂದುಕೊರತೆ ನಿವಾರಣಾ ಸಭೆ ಮಾಡಬೇಕೆಂದು ಇಲಾಖೆ ಆದೇಶವಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಸಭೆಯನ್ನು ನಡೆಸದಿರುವುದು ಅತ್ಯಂತ ವಿಷಾದನೀಯ. ಆದ್ದರಿಂದ ಕೂಡಲೇ ಜಿ.ಪಂ ಸಿಇಒ ಅವರು ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಮಾತನಾಡಿ, ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಇದೇ ನವೆಂಬರ್.6ರಂದು ಸಭೆ ನಿಗದಿ ಮಾಡುವುದಾಗಿ ಘೋಷಿಸಿದರು.

ಭುವನಾ ಬಳ್ಳಾರಿ, ಸುಳ್ಳದ, ಮಂಜುಳಾ ಗಾಡಗೋಳಿ, ರಾಜೇಶ್ವರಿ ಕೋರಿ, ಸರೋಜಾ ಮಡಿವಾಳರ, ಭಾರತಿ ಶೆಟ್ಟರ್, ಜಯಶ್ರೀ ದೇಸಾಯಿ, ರಾಧ ರಾಟೊಳ್ಳಿ, ರೇಣುಕಾ ಬೋಗಾರ, ಸುಜಾತಾ ಅಂಗಡಿ, ಸುಜಾತಾ ಹಿರೇಮಠ,  ಶೋಭಾ ಸಾವಂತನವರ, ಗೌರಮ್ಮ ಮೇಟಿ, ಅನ್ನಪೂರ್ಣ ಗಿರಿಯಪ್ಪಗೌಡರ, ಸುಜಾತಾ ಅಂಗಡಿ  ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೇಮಾವತಿ ಲಿಂಕ್ ಕೆನಾಲ್‌ ಯೋಜನೆಗೆ ವಿರೋಧ; ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್

ತುಮಕೂರು ಜಿಲ್ಲೆಗೆ ನೀರು ಒಗಿಸುತ್ತಿರುವ ಹೇಮಾವತಿ ಎಡದಂಡೆ ನಾಲೆಗೆ ಲಿಂಕ್‌ ಕೆನಾಲ್...

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...