ಧಾರವಾಡ | ಸರ್ಕಾರಿ ಶಾಲೆಗಳನ್ನು ಕೊಲ್ಲುವ ಕೆಪಿಎಸ್ ಮ್ಯಾಗ್ನೆಟ್ ನ್ನು ಖಂಡಿಸಿ ಪ್ರತಿಭಟನೆ

Date:

ಧಾರವಾಡ ಜಿಲ್ಲೆಯಲ್ಲಿ 18 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಡಿ. 16ರಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಧಾರವಾಡದಲ್ಲಿ 18 ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸುವುದರ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸುವುದರ  ಮೂಲಕ ಸುತ್ತ ಮುತ್ತಲಿನ ಶಾಲೆಗಳನ್ನು ಮುಚ್ಚುವುದಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಸಚಿವರು ನಾವು ಒಂದೇ ಒಂದು ಶಾಲೆಯನ್ನು ಮುಚ್ಚುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದರ ಜೊತೆಗೆ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳನ್ನು ಕೆಪಿಎಸ್ ಶಾಲೆಗೆ ಕರೆ ತರಲು ವಾಹನಗಳನ್ನು ಕಲ್ಪಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಸರ್ಕಾರದ ಆದೇಶಗಳು ಹೇಳುವುದೇ ಒಂದು ಶಿಕ್ಷಣ ಸಚಿವರ ಹೇಳಿಕೆ ಮತ್ತೊಂದು ಆದ್ದರಿಂದ ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಸೆ ನಿಜವಾದಲ್ಲಿ ಈ ಕೂಡಲೇ  ರಾಜ್ಯ ಸರ್ಕಾರ  ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿನ್ನೆಲೆಯಲ್ಲಿ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಸುವರ್ಣ ಸೌಧ ಚಲೋಗೆ ಕರೆ ನೀಡಿದ್ದು  ಮುಂಚೆ ಇದಕ್ಕೆ ಅನುಮತಿ ಕೊಟ್ಟಿದ್ದು ನಂತರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಅದನ್ನು ರದ್ದುಗೊಳಿಸಿದೆ. ಇದು ಪ್ರಜಾತಾಂತ್ರಿಕ ದೇಶದಲ್ಲಿ ಹೋರಾಟದ ಹಕ್ಕನ್ನು ಕಗ್ಗೊಲೆಗೊಳಿಸುವ ಪ್ರಯತ್ನವಾಗಿದೆ. ಸರ್ಕಾರ ಈ ಆದೇಶವನ್ನು ಹಿಂತೆಗೆದುಕೊಳ್ಳುವವರೆಗೂ ರಾಜ್ಯದ ಜನತೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ಮಾಡುತ್ತಾರೆ ಇದನ್ನು ಎದುರಿಸಲು ಸರ್ಕಾರ ತಯಾರಾಗಬೇಕು ಎಂದರು.

ಇದನ್ನೂ ಓದಿ ಧಾರವಾಡ | ರೈಲು ಹಳಿಗೆ ಬಿದ್ದು ವಿದ್ಯಾರ್ಥಿನಿ ಸಾವು

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷೆ ಸಿಂಧೂ ಕೌದಿ, ಕಛೇರಿ ಕಾರ್ಯದರ್ಶಿ ಸ್ಪೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಶಾಂತೇಶ್, ಸಿದ್ದು, ರವಿ, ಪ್ರಜ್ವಲ್, ಪರಶುರಾಮ್ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...