ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಆಗಸ್ಟ್ 5ರ ಶನಿವಾರ ಪೂರ್ತಿ ದಿನ ತರಗತಿ ನಡೆಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ಧಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಇಂದು ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಭಾರೀ ಮಳೆ; 41 ಮನೆಗಳಿಗೆ ಹಾನಿ, ಶಾಲೆ-ಕಾಲೇಜುಗಳಿಗೆ ರಜೆ
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5 ರ ಶನಿವಾರ ದಿನದಂದು ಪೂರ್ಣ ದಿನ ತರಗತಿಗಳನ್ನು ನಡೆಸುವ ಮೂಲಕ ಈ ದಿನದ (ಜುಲೈ 24) ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜುಗಳಿಗೆ ಸಂಬಂಧಿಸಿದ ಅಧಿಕಾರಿಗಳು ತಮಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.