ಧಾರವಾಡ | ನ್ಯಾಯಾಂಗದ ವಿಶ್ವಾಸರ್ಹತೆ ಹೆಚ್ಚಿಸುವಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಪರಿಣಾಮಕಾರಿ: ನ್ಯಾ. ಬಿ.ಎಸ್.ಭಾರತಿ

Date:

ರಾಷ್ಟ್ರಾದ್ಯಂತ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಲಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತಿದೆ ಅದರಂತೆ ಡಿಸೆಂಬರ್ 13, 2025 ರಂದು ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಲಾತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ್ಯಾಯಾಂಗದ ವಿಶ್ವಾಸರ್ಹತೆ ಹೆಚ್ಚಿಸುವಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಪರಿಣಾಮಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹೇಳಿದರು.

- Advertisement -

ನ. 21ರಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಧಾರವಾಡ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸುವ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಮಾತನಾಡುತ್ತಾ, ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ ಭಾಗವಹಿಸುವದರಿಂದ ಕಕ್ಷೀದಾರರಿಗೆ ಮತ್ತು ನ್ಯಾಯವಾದಿಗಳಿಗೆ, ನ್ಯಾಯಾಲಯಕ್ಕೆ ತುಂಬಾ ಅನಕೂಲವಾಗುತ್ತದೆ. ಕಾರ್ಯದ ಒತ್ತಡ ಕಡಿಮೆಯಾಗಿ, ಸಮಯ ಮತ್ತು ಆರ್ಥಿಕ ಉಳಿತಾಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅನೇಕ ಹಳೆಯ ಪ್ರಕರಣಗಳು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ ಪರಿಹಾರವಾಗುತ್ತಿರುವುದು ಅದಲಾತ್ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ ನ್ಯಾಯವಾದಿಗಳು ಸಕ್ರೀಯವಾಗಿ ಭಾಗವಹಿಸುತ್ತಿರುವದರಿಂದ ಸಾವಿರಾರು ಪ್ರಕರಣಗಳು ಸುಖಾಂತ್ಯವಾಗುತ್ತಿವೆ. ಇದು ಸಹಜ ನ್ಯಾಯ ಮತ್ತು ಸುಲಭ ನ್ಯಾಯದ ಆಶಯವನ್ನು ಈಡೆರಿಸುತ್ತಿದೆ. ಇದು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಜನರಲ್ಲಿ ವಿಶ್ವಾಸ ಮತ್ತು ಗೌರವವನ್ನು ಹೆಚ್ಚಿಸಿದೆ. ಇಂತಹ ಉತ್ತಮ ಬೆಳವಣಿಗೆಗಳು ನ್ಯಾಯಾಂಗದ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಹೇಳಿದರು.

ಕಳೆದ ಸಪ್ಟೆಂಬರ್ 13 ರಂದು ಜಿಲ್ಲೆಯ ಎಲ್ಲ ನ್ಯಾಯಾಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ 1,01,463 ವಿವಿಧ ಪ್ರಕಾರದ ಪ್ರಕರಣಗಳು ರಾಜಿ ಇತ್ಯರ್ಥವಾಗಿದೆ. ಬರುವ ಡಿಸೆಂಬರ್ 13 ರಂದು ಆಯೋಜಿಸಲಿರುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ರಾಜಿ ಸಂಧಾನಕ್ಕಾಗಿ ಲಘು ವ್ಯಾಜ್ಯ ಪ್ರಕರಣಗಳು ಸೇರಿದಂತೆ ಅರ್ಹ ಒಟ್ಟು 10,746 ಪ್ರಕರಣಗಳನ್ನು ದಿನಾಂಕ:20-11-2025 ವರೆಗೆ ಗುರುತಿಸಲಾಗಿದ್ದು, ರಾಜೀ ಸಂಧಾನಕ್ಕಾಗಿ ಅರ್ಹ ಪ್ರಕರಣಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟಾರೆ ವಿವಿಧ ರೀತಿಯ 54,739 ಪ್ರಕರಣಗಳು ವಿಚಾರಣೆಗೆ ನ್ಯಾಯಾಲಯಗಳ ಮುಂದೆ ಬಾಕಿ ಇವೆ ಎಂದು ತಿಳಿಸಿದರು.

ರಾಜಿ ಮಾಡಲಾಗುವ ಪ್ರಕರಣಗಳಲ್ಲಿ ಚೆಕ್ ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಕುರಿತ ಪ್ರಕರಣಗಳು, ಸಾಲ ವಸೂಲಾತಿ ದಾವೆಗಳು ಮತ್ತು ವ್ಯಾಜ್ಯ ಪೂರ್ವ ದಾವೆಗಳು, ಕೌಟುಂಬಿಕ (ವಿಚ್ಛೇಧನ ಹೊರತುಪಡಿಸಿ) ಹಾಗೂ ಜೀವನಾಂಶ ಪ್ರಕರಣಗಳು, ರಾಜಿಯಾಗುವಂತಹ ಕ್ರೀಮಿನಲ್ ಪ್ರಕರಣಗಳು, ರಾಜಿಯಾಗುವಂತಹ ಸಿವಿಲ್ ಮತ್ತು ಎಲ್ಲಾ ರೀತಿಯ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಇತ್ಯರ್ಥ ಮಾಡಲಾಗುತ್ತದೆ ಎಂದರು.

ಶೇ. 50 ರಷ್ಟು ದಂಡ ರಿಯಾಯಿತಿ:
ರಾಜ್ಯ ಸರ್ಕಾರವು ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಕುರಿತ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ, ಅಧಿಸೂಚನೆ ಹೊರಡಿಸಿದೆ. ಇಂತಹ ಪ್ರಕರಣಗಳನ್ನು ಇತ್ಯರ್ಥಕ್ಕೆ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ವಿಶೇಷವಾಗಿ ಪರಿಗಣಿಸಿ, ಪರಿಹರಿಸಲಾಗುತ್ತದೆ. ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರಿಗೆ ಪೆÇಲೀಸ್ ಇಲಾಖೆಯ ಸಂಚಾರಿ ಈ ಚಲನಗಳಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ. ಕರ್ನಾಟಕ ಸರ್ಕಾರವು ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ 2023ರ ಫೆ. 11ರ ಒಳಗಾಗಿ ದಾಖಲಾಗಿರುವ ಪ್ರಕರಣಗಳಲ್ಲಿ ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2020 ರವರೆಗೆ ದಾಖಲಾದ ಪ್ರಕರಣಗಳಲ್ಲಿ ಶೇ.50 ರಷ್ಟು ವಿನಾಯಿತಿಯನ್ನು ನೀಡಿದೆ. ಸಂಬಂಧಪಟ್ಟ ವಾಹನದ ಮಾಲೀಕರು ನವೆಂಬರ್ 21 ರಿಂದ 2025 ರಿಂದ ಡಿಸೆಂಬರ್ 12, 2025 ರವರೆಗೆ ದಂಡವನ್ನು ಭರಣ ಮಾಡಿ ಸದರಿ ಸದಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.

ಧಾರವಾಡ ವಕೀಲರ ಸಂಘದ ಅಧ್ಯಕ್ಷ ಅಶೋಕ ಏಣಗಿ ಮಾತನಾಡಿ, ಲೋಕ ಅದಾಲತ್ ಕಾರ್ಯಕ್ರಮವು ಕಕ್ಷಿದಾರರಿಗೆ ಹಾಗೂ ವಕೀಲರುಗಳಿಗೆ ಇದು ಅತ್ಯಂತ ಅನುಕೂಲಕರವಾಗುತ್ತದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ ಧಾರವಾಡ | ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡಮನಿ ಅವರು ಸ್ವಾಗತಿಸಿ, ಮಾತನಾಡಿ, ರಾಷ್ಟ್ರೀಯ ಲೋಕ ಅದಾಲತ್ ಎನ್ನುವುದು ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಕಕ್ಷಿಗಾರರ ನೈಜತೆಯನ್ನು ಪರೀಕ್ಷಿಸಿ, ರಾಜಿ ಸಂಧಾನ ಮಾಡಲಾಗುವುದು ಹಾಗೂ ಇದು ಅತ್ಯಂತ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...