ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

Date:

  • ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ
  • ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ

ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ ಮತ್ತು ನ್ಯಾಯಾಂಗ ವಿರೋಧಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ” ಎಂದು ಆರೋಪಿಸಿದರು.

“ಧರ್ಮದ ಆಧಾರದ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಿದ್ದು, ಅಗತ್ಯವಿರುವ ಸಮುದಾಯಗಳಿಗೆ ಮರು ವಿತರಿಸಿದೆ” ಎಂದು ಸಮರ್ಥಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದ್ದು, ಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಸರಿಪಡಿಸಿದೆ. ಕೆಲವು ಮಠಾಧೀಶರು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ್ದಾರೆ. ಆದರೆ, ಇದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ಸಂಸ್ಕೃತಿಯಾಗಿರುವುದರಿಂದ ಈ ಶ್ರೀಗಳಿಗೆ ಇದು ಸೂಕ್ತವಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?  ತುಮಕೂರು | ಎಚ್‌ಡಿಕೆ ಮತ್ತೊಮ್ಮೆ ಸಿಎಂ ಆಗಬೇಕು; ಮಲೆಮಹದೇಶ್ವರಕ್ಕೆ ಜೆಡಿಎಸ್ ಕಾರ್ಯಕರ್ತರ ಪಾದಯಾತ್ರೆ

“ವಾಸ್ತವವಾಗಿ, ಲಿಂಗಾಯತ ಪಂಚಮಸಾಲಿಗಳು ಮತ್ತು ಒಕ್ಕಲಿಗರಿಗೆ ಮೀಸಲಾತಿ ನೀಡಲು ಕಾಂಗ್ರೆಸ್‌ಗೆ ಆಸಕ್ತಿ ಇರಲಿಲ್ಲ. ಕೆಲವು ಶಾಸಕರು ಬಿಜೆಪಿಗೆ ತೊಂದರೆ ಉಂಟುಮಾಡಲು ಮಾತ್ರ ಪಂಚಮಸಾಲಿ ಚಳವಳಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...