ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ . ಈಗ ಈ ನಿಲ್ದಾಣವನ್ನು 13 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳಿಸುವ ಮೂಲಕ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಧಾರವಾಡದ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.
“ಒಂದು ವರ್ಷದ ಅವಧಿಯಲ್ಲಿ ಬಸ್ ನಿಲ್ದಾಣದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ. ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್‌ಗಳ ಖರೀದಿ ಮಾಡಲಾಗುತ್ತಿದ್ದು, ಇದರಿಂದ ಬಸ್‌ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಎನ್ ಎಚ್ ಕೋನರಡ್ಡಿ, ಸಾರಿಗೆ ಇಲಾಖೆ ಎಂಡಿ ಭರತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಇದ್ದರು.