ಧಾರವಾಡದ ಜರ್ನಲಿಸ್ಟ್ ಗಿಲ್ಡ್ ಕಟ್ಟಡ ನವೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೆವು. ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುದಾನ ನೀಡಿದೆ. ಉಳಿದ ಎರಡನೇ ಹಂತದ ಕಾಮಗಾರಿಗೂ ಅಗತ್ಯ ಅನುದಾನ ಲಭಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡ ನಗರದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, “ಎರಡನೇ ಹಂತದ ಕಾಮಗಾರಿಗೂ ಅಗತ್ಯ ಅನುದಾನ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಗಿಲ್ಡ್‌ನಲ್ಲಿ ಪತ್ರಕರ್ತರು ಉತ್ತಮ ಚಟುವಟಿಕೆಗಳಿಗೆ ಮಾತ್ರ ಒತ್ತು ನೀಡಬೇಕು” ಎಂದು ಸಲಹೆ ನೀಡಿದರು.
ಧಾರವಾಡ ಜರ್ನಲಿಸ್ಟ್ ಗಿಲ್ಡ್ ಅಧ್ಯಕ್ಷ ಡಾ ಬಸವರಾಜ್ ಹೊಂಗಲ್ ಪ್ರಾಸ್ತಾವಿಕವಾಗಿ ಮಾತನಾಡಿ, “ಧಾರವಾಡ ಪತ್ರಕರ್ತರಿಗೆ ಉತ್ತಮ ಪತ್ರಿಕಾ ಭವನ ಇರಲಿಲ್ಲ. ಕಳೆದ ಒಂದು ವರ್ಷದಲ್ಲಿ ಪತ್ರಿಕಾ ಭವನ ಸಾಕಷ್ಟು ಚಟುವಟಿಕೆ ಮಾಡುತ್ತಿದೆ. ಸಂವಿಧಾನದ 4ನೇ ಅಂಗವಾಗಿರುವ ಪತ್ರಿಕಾ ರಂಗಕ್ಕೆ ಕನಿಷ್ಟ ಮೂಲ ಸೌಕರ್ಯಗಳನ್ನು ಸರ್ಕಾರಗಳು ಒದಗಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ರಾಮನಗರ | ವಕೀಲರು-ಪೊಲೀಸರು-ದಲಿತ ಮುಖಂಡರ ನಡುವೆ ತಿಕ್ಕಾಟ
ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋಧ್ಯಮ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಬಹುತೇಕರು ಇದ್ದರು.
