ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಧಾರವಾಡದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ಶಹರದಲ್ಲಿರುವ ಅಂಗಡಿ, ಗ್ಯಾರೇಜ್, ಬೇಕರಿ, ಹೋಟೆಲ್, ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಿ ಸಂಸ್ಥೆಯ ಮಾಲಿಕರಿಗೆ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕ (ನೀಷೆಧ ಮತ್ತು ನಿಯಂತ್ರಣ) ಕಾಯ್ದೇ 1986 ರ ಕುರಿತು ಜಾಗೃತಿ, ನಿಯಮ ಬಾಹಿರವಾಗಿ ಮಕ್ಕಳನ್ನು ನೇಮಿಸಿಕೊಂಡಲ್ಲಿ ರೂ. 20 ಸಾವಿರ ರಿಂದ 50 ಸಾವಿರದ ವರೆಗೆ ದಂಡ, ಇಲ್ಲವೇ ಕನಿಷ್ಟ 6 ತಿಂಗಳಿಂದ ಎರಡು ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಾಲಿಕರಿಗೆ ಹಾಗೂ ಸಾರ್ವಜನಿಕರಿಗೆ ಕಾಯ್ದೆ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎನ್‍ಟಿಟಿಎಫ್ ಹತ್ತಿರದ ರಿಚ್ ಆಟೋ ಸ್ಪಾರ್ ಗ್ಯಾರೇಜನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕ ಪತ್ತೆ ಆಗಿದ್ದು, ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಪಿ ದೊಡ್ಡಮನಿ, ಕಾರ್ಮಿಕ ಅಧಿಕಾರಿ ಮಾರಿಕಾಂಬ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಕೋಟಿಮಠ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಿ, ಯೋಜನಾ ನಿರ್ದೇಶಕ ಬಸವರಾಜ ಸಿ ಪಿ, ಪೊಲೀಸ್ ಸಿಬ್ಬಂದಿ ಬಸವರಾಜ ಕುಂಬಾರಗೊಪ್ಪ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಾಮಾಜಿಕ ಕಾರ್ಯಕರ್ತ ಕರಿಯಪ್ಪ ಕೌಜಲಗಿ ಭಾಗವಹಿಸಿದ್ದರು.