ಧಾರವಾಡ | ‘ಸಂಗೀತ ಕಾಶಿ’  ಕುಂದಗೋಳದಲ್ಲಿ ಅಹೋರಾತ್ರಿ ಸಂಗೀತೋತ್ಸವ

Date:

‘ಸಂಗೀತ ಕಾಶಿ’ ಎಂದೇ ಖ್ಯಾತಿ ಪಡೆದಿರುವ ಕುಂದಗೋಳದಲ್ಲಿ, ದಿ. ಸವಾಯಿ ಗಂಧರ್ವರ 73ನೇ ಪುಣ್ಯತಿಥಿಯ ನಿಮಿತ್ತ ಅಹೋರಾತ್ರಿ ಸಂಗೀತ ಮಹೋತ್ಸವ ಆರಂಭಗೊಂಡಿದೆ. ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 

- Advertisement -

ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆನೀಡಿ, ಮಾತನಾಡಿ, ಭಾರತೀಯರ ಜೀವನದಿಂದ ಸಂಗೀತವನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಜನನದಿಂದ ಮರಣದವರೆಗೂ ಸಂಗೀತ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಜೋಗುಳ, ಮಂತ್ರಗಳು, ಹಬ್ಬಗಳು ಹೀಗೆ ಪ್ರತಿಯೊಂದು ಹಂತದಲ್ಲೂ ಸಂಗೀತವಿದೆ ಎಂದು ಹೇಳಿದರು. ಪ್ರತಿ ವರ್ಷ ನಡೆಯುವ ಈ ಸಂಗೀತೋತ್ಸವವು ನಿಜವಾದ ಹಬ್ಬವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಶಾಸಕ ಎಂ. ಆರ್. ಪಾಟೀಲ್ ಮಾತನಾಡಿ, ಒಂದು ತಿಂಗಳ ಪರಿಶ್ರಮದ ನಂತರ ಇಂತಹ ದೊಡ್ಡ ಕಾರ್ಯಕ್ರಮ ಆಯೋಜಿಸುವುದು ಬಹಳ ಕಷ್ಟ. ಒಂದು ಲಗ್ನ ಮಾಡುವುದಕ್ಕಿಂತಲೂ ಕಠಿಣವಾದ ಕೆಲಸ. ವಿಶ್ವಸ್ಥ ಮಂಡಳಿ ತಂಡವಾಗಿ ಕೆಲಸ ಮಾಡುತ್ತಿದ್ದು, ಕುಂದಗೋಳದ ಸಂಗೀತ ಪರಂಪರೆಯನ್ನು ಉಳಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ ಎಂದು ಹೇಳುತ್ತಾ, ಮುಂದೆಯೂ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ದಿ. ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆ ಅಧ್ಯಕ್ಷ ಅರವಿಂದ ಕಟಗಿ ಮಾತನಾಡಿ, ಕಳೆದ 73 ವರ್ಷಗಳಿಂದ ನಿರಂತರವಾಗಿ ಈ ಮಹೋತ್ಸವ ನಡೆಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯ. ಸವಾಯಿ ಗಂಧರ್ವರ ಶಿಷ್ಯರಾದ ಪಂಡಿತ್ ಭೀಮಸೇನ ಜೋಷಿ, ಗಂಗೂಬಾಯಿ ಹಾನಗಲ್ ಅವರಂತಹ ದಿಗ್ಗಜರು ಕುಂದಗೋಳವನ್ನು ತಮ್ಮ ತವರಮನೆ ಎಂದು ಪರಿಗಣಿಸಿದ್ದರು.

IMG 20250916 WA0002

ಈ ವೇಳೆ ಪದ್ಮಶ್ರೀ ಅಶ್ವಿನಿ ಭಿಡೆ ದೇಶಪಾಂಡೆ (ಗಾಯನ), ವಿದುಷಿ ಪದ್ಮನಿ ರಾವ್ (ಗಾಯನ), ಪಂ. ಉಮೇಶ ಚೌಧರಿ (ಗಾಯನ), ಪಂ. ಕೃಷ್ಣೇಂದ್ರ ವಾಡೀಕರ (ಗಾಯನ), ವಿದ್ವಾನ್ ದ್ವಾರಕೀಶ ಎಂ. (ವೀಣಾ ವಾದನ), ಪಂ. ಆನಂದ ಪಾಟೀಲ (ಹಿಂದುಸ್ತಾನಿ ಗಾಯನ) ಅವರಿಂದ ಸಂಗೀತ ಕಾರ್ಯಕ್ರಮಗಳು ನಡೆದವು. ರಾತ್ರಿ ವೇಳೆ, ಪಂ. ರತನ ಮೋಹನ ಶರ್ಮಾ, ದೇವಿ, ಅಭಿಷೇಕ ಜೋಶಿ, ಕುಮಾರ ಸ್ವರ ಶರ್ಮಾ, ರಾಜೇಶ್ವರಿ ಪಾಟೀಲ, ಕುಮಾರ ಪೃಥ್ವಿರಾಜ ಕುಲಕರ್ಣಿ, ಕುಮಾರ ಹೇಮಂತ ಜೋಶಿ ಅವರಿಂದ ಸಂಗೀತ ಕಾರ್ಯಕ್ರಮಗಳು ನಡೆದು, ಎರಡು ರಾತ್ರಿ, ಎರಡು ಹಗಲು ಸಂಗೀತದ ಆರಾಧನೆ ನಡೆಯಲಿದೆ. ಮುಂಬೈ, ಮಧ್ಯಪ್ರದೇಶ, ಗುಜರಾತ್‌ನಿಂದಲೂ ಸಂಗೀತ ಪ್ರೇಮಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಶ್ಯಾಮಸುಂದರ ದೇಸಾಯಿ, ಟಿ.ಎಸ್.ಗೌಡಪ್ಪನವರ, ಅರ್ಜುನ ನಾಡಗೀರ, ಮುತ್ತಣ್ಣ ತಡಸೂರ, ಈರಣ್ಣ ನಾಗರಾಳ, ನಾಗರಾಜ ದೇಶಪಾಂಡೆ, ಗಂಗಾಧರಯ್ಯ ನಾವಳ್ಳಿಮಠ, ಅಭಿಷೇಕ್ ಪಾಟೀಲ್, ಬಸವರಾಜ ಬ್ಯಾಹಟ್ಟಿ, ವೀಣಾ ಹಾನಗಲ್ ಸೇರಿದಂತೆ ಅನೇಕ ಗಣ್ಯರು, ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಸಂಗೀತೋತ್ಸವ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | 5.20ಲಕ್ಷ ಮೌಲ್ಯದ 65 ಗ್ರಾಂ ಬಂಗಾರ, 50,000 ಸಾವಿರ ನಗದು ಸೇರಿ ಇಬ್ಬರ ಬಂಧನ

ಈ ಸಂದರ್ಭದಲ್ಲಿ, ಪದ್ಮಶ್ರೀ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ಸವಾಯಿ ಗಂಧರ್ವರ ರಾಷ್ಟ್ರೀಯ ಸಂಗೀತ ಪುರಸ್ಕಾರ ನೀಡಿ ಗೌರವಿಸಿದರು. ಇದೆ ವೇಳೆ  ಶಿರಹಟ್ಟಿ ಸಂಸ್ಥಾನ ಮಠದ ಫಕೀರ ಸಿದ್ಧರಾಮ ಸ್ವಾಮಿಗಳು ಮಾತನಾಡಿದರು. ಸಿದ್ದಲಿಂಗೇಶ ಧಾರವಾಡಶಟ್ಟರ ಸ್ವಾಗತಿಸಿದರು, ಡಾ!ಎನ್.ಎಸ್.ಕುಸುಗಲ್ ನಿರೂಪಿಸಿದರು, ಶಂಕರಗೌಡ ದೊಡ್ಡಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...