ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಗುರಯ್ಯ ಹಿರೇಮಠ ಮತ್ತು ಪ್ರಜ್ವಲ್ ಸೂರಣಗಿ ತಾಳಾತ್ಮಕ ಯೋಗಾಸನ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಗುರಯ್ಯ ಹಿರೇಮಠ ಕಲಾತ್ಮಕ ಯೋಗಾಸನ ವೈಯಕ್ತಿಕ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದು, ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯ ಬಿ.ಬಿ. ಬೂದಿಹಾಳ, ಬಿ.ಎಂ. ಕಜ್ಜಿ ಹಾಗೂ ಪ್ರಾಚಾರ್ಯ ಪ್ರೊ. ರಮೇಶ ಯ. ಅತ್ತಿಗೇರಿ ಉಪಸ್ಥಿತರಿದ್ದರು.