ಧಾರವಾಡ | ದ.ರಾ. ಬೇಂದ್ರೆ ಜನ್ಮದಿನವನ್ನು ಕವಿದಿನ ಎಂದು ಘೋಷಿಸಲು ಸರಜೂ ಕಾಟ್ಕರ್ ಆಗ್ರಹ

Date:

44 ವರ್ಷಗಳು ಗತಿಸಿದರೂ ಸಹ ದ.ರಾ.ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಓದುಗರ ಜನಮಾನಸದಲ್ಲಿ ಹಾಸುಹೊಕ್ಕಾಗಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದರ ಜೊತೆಗೆ ಅವರ ಜನ್ಮದಿನ ಜನೆವರಿ 31 ನ್ನು ಕವಿದಿನ ಎಂದು ಘೋಷಣೆ ಮಾಡಬೇಕೆಂದು ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದರು.

- Advertisement -

ಅಕ್ಟೋಬರ್ 26ರಂದು ನಡೆದ ಬೇಂದ್ರೆಯವರ 44 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 44 ವರ್ಷಗಳ ಹಿಂದೆ ದೀಪಾವಳಿಯ ನರಕ ಚತುದರ್ಶಿಯಂದೇ ದ.ರಾ.ಬೇಂದ್ರೆಯವರು ಅಸ್ತಂಗತರಾಗಿದ್ದು, ಇಡೀ ಕನ್ನಡ ಸಾರಸ್ವತ ಲೋಕಕ್ಕೆ ಕತ್ತಲೆ ಆವರಿಸಿದಂತಾಗಿತ್ತು. ಬೇಂದ್ರೆಯವರ ಕಾವ್ಯವು ನವನವೀನವಾದ ಕಾವ್ಯಗಳಾಗಿವೆ. ಅವುಗಳನ್ನು ಎಷ್ಟು ಸಲ ಓದುತ್ತೇವೆಯೋ ಅಷ್ಟು ಹೊಸ ಹೊಸ ಅರ್ಥಗಳನ್ನು ನೀಡುತ್ತವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಖ್ಯ ಅತಿಥಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಮಾತನಾಡಿ, ಬದುಕಿನ ಮೌಲ್ಯಗಳನ್ನು ಬಹಳಷ್ಟು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿಕೊಟ್ಟವರು ಬೇಂದ್ರೆ. ಬೇಂದ್ರೆಯವರ ಸಾಹಿತ್ಯವನ್ನು ಸ್ಪರ್ಶಿಸುವುದು, ಅವರ ಕಾವ್ಯವನ್ನು ಪ್ರವೇಶಿಸುವುದು ಸಾಮಾನ್ಯವಾದುದಲ್ಲ ಎಂದರು.

FB IMG 1761790593139

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಮಾತನಾಡಿ, ಬೇಂದ್ರೆಯವರು ಅಜ್ಜಿ ಗೋಧುಬಾಯಿ, ತಾಯಿ ಅಂಬವ್ವ ಅವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಹೆಂಡತಿಯನ್ನು ಸಖೀಯನ್ನಾಗಿ ನೋಡಿದವರು. ತಾಯಿ ಹೆಸರನ್ನೊಳಗೊಂಡು ತಮ್ಮ ಕಾವ್ಯನಾಮವನ್ನು ಅಂಬಿಕಾತನಯದತ್ತ ಎಂದು ಇಟ್ಟಿರುವುದು ಅವರ ಸ್ತ್ರೀಪರ ವಿಶೇಷ ನೋಟವನ್ನು ಗಮನಿಸಬಹುದಾಗಿದೆ. ಇಂದಿನ ಮಕ್ಕಳಿಗೆ ಬೇಂದ್ರೆಯವರ ಕಾವ್ಯದ ಸೊಗಡನ್ನು ಅರ್ಥೈಸಬೇಕಿದೆ ಎಂದರು.

ಧಾರವಾಡದ ಗಾಯಕಿ ವಿದುಷಿ ರಾಧಾ ದೇಸಾಯಿ ಮತ್ತು ವೃಂದದವರು. ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸಿದರು. ಅಪೂರ್ವಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ವೋಟ್ ಚೋರಿ; ಆಧಾರ ಸಹಿತವಾಗಿ ಬಹಿರಂಗ ಮಾಡುತ್ತೇವೆ: ಮಯೂರ್ ಜಯಕುಮಾರ್

ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಸದಸ್ಯ ಡಾ.ಶಿಲಾಧರ ಮುಗಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಅಶೋಕ ಶೆಟ್ಟರ, ಡಾ. ಶರಣಮ್ಮ ಗೊರೇಬಾಳ, ಇಮಾಮಸಾಬ್ ವಲ್ಲೆಪ್ಪನವರ, ಪ್ರಭು ಕುಂದರಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...