ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಸರ್ವರ್ ದೋಷದಿಂದ ನೋಂದಣಿ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಸರ್ವರ್ ಸಮಸ್ಯೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ತಲೆನೋವಾಗಿದೆ. ಇದರಿಂದ ಹೊರರೋಗಿಗಳು ಹೈರಾಣಾಗಿದ್ದು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ಹೊರರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರವಾಡದ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದ ಜನರು ಸಾಲುಗಟ್ಟಿ ನಿಂತು ಬೇಸತ್ತು ಜಿಲ್ಲಾಆಸ್ಪತ್ರೆಯ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದು ಜಗಳಕ್ಕೆ ಕಾಣವಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯತೆ ಈಡೇರಿಕೆಗೆ ಆಗ್ರಹ
ಈ ದಿನ.ಕಾಮ್ನೊಂದಿಗೆ ಮಾತನಾಡಿದ ಆಸ್ಪತ್ರೆಯ ಸಿಬ್ಬಂದಿ ಸಾಗರ್, “ಸರ್ವರ್ ದೋಷದಿಂದ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಹೇಳಿದರೂ ಯಾರೂ ಮಾತು ಕೇಳುತ್ತಿಲ್ಲ. ಸರ್ವರ್ ಸಮಸ್ಯೆ ಅರ್ಥಮಾಡಿಕೊಳ್ಳದೆ ಏಕಾಏಕಿ ಜಗಳಕ್ಕೆ ಬರುತ್ತಿದ್ದಾರೆ. ಸಿಬ್ಬಂದಿಯ ಮೇಲೆಯೇ ರೇಗಾಡುತ್ತಿದ್ದಾರೆ. ಸರ್ವರ್ ದೋಷಕ್ಕೆ ಸಿಬ್ಬಂದಿಗಳು ಏನು ಮಾಡಲು ಸಾಧ್ಯ?” ಎಂದು ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದರು.