ಧಾರವಾಡ | ಜು.14ರಂದು ಹೊಸೂರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮ

Date:

Advertisements

2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಜುಲೈ 14ರಂದು ಹುಬ್ಬಳ್ಳಿಯ ಹೊಸೂರ ಬಸ್ ನಿಲ್ದಾಣದಲ್ಲಿ ಬಸ್ ಪೂಜೆ ಹಾಗೂ ಸಾರ್ವಜನಿಕರಿಗೆ ಸಹಿ ಹಂಚುವ ಮೂಲಕ ಸಂಭ್ರಮಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊಟ್ಟಮೊದಲಿಗೆ ಸರ್ಕಾರ ಜಾರಿಗೊಳಿಸಿದೆ. 2023ರ ಜೂನ್‌ 11ರಂದು ಶಕ್ತಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿದೆ. ಈ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಈಗ ₹500 ಕೋಟಿ ಗಡಿಯನ್ನು ದಾಟಿರುತ್ತದೆ. ಇದೊಂದು ಸಂಭ್ರಮದ ಸಂಗತಿ. ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವಂತಹ ಏಕೈಕ ಸರ್ಕಾರ ಕಾಂಗ್ರೆಸ್‌ ಸರ್ಕಾರವಾಗಿದೆ” ಎಂದು ಹೇಳಿದರು.

“ಶಕ್ತಿ ಯೋಜನೆಯಡಿಯಲ್ಲಿ ನಾಡಿನ 500 ಕೋಟಿ ಹೆಣ್ಣುಮಕ್ಕಳು ರಾಜ್ಯದ ಎಲ್ಲ ಸರ್ಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸಮಿತಿಯಿಂದ ಆಚರಿಸುತ್ತಿದ್ದಾರೆ. ಆದ್ದರಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ 500 ಕೋಟಿ ಫಲಾನುಭವಿಗಳು ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಜುಲೈ 14ರ ಬೆಳಿಗ್ಗೆ 10:30ಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ತಾಲೂಕುಗಳ ಬಸ್ ಡಿಪೋ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರುಗಳು ಒಂದು ಬಸ್ಸಿಗೆ ಪೂಜೆಯನ್ನು ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸಲಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ನನ್ನ ವಿರುದ್ಧ ಸೋತ ಅಭ್ಯರ್ಥಿಯ ದೂರಿನನ್ವಯ ಇಡಿ ದಾಳಿ: ಶಾಸಕ ಸುಬ್ಬಾರೆಡ್ಡಿ

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರು, ಸಂಸ್ಥೆಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಎಸ್ ಆರ್ ಪಾಟೀಲ, ಜಿಲ್ಲೆಯ ಶಾಸಕರು, ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಧಾರವಾಡ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್ ಪಾಟೀಲ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X