ಧಾರವಾಡ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

Date:

Advertisements

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಆರಂಭಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅವಳಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು.

ನಗರದ ಪೆಂಡಾರಗಲ್ಲಿ, ತಡಕೋಡ ಓಣಿ ಪ್ರದೇಶಗಳಲ್ಲಿ ಸಂಚರಿಸಿ, ಸಮೀಕ್ಷಿಕರು ಮಾಡುತ್ತಿರುವ ಸಮೀಕ್ಷೆಯನ್ನು ಪರಿಶೀಲಿಸಿ, ಸಮೀಕ್ಷೆದಾರರಿಂದ ಮಾಹಿತಿ ಪಡೆದು, ಮಾರ್ಗದರ್ಶನ ನೀಡುತ್ತಾ ಮಾತನಾಡಿ, ಸಮೀಕ್ಷಿಕರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು. ಸಮೀಕ್ಷಿಕರು ತಮಗೆ ಗುರುತಿಸಿರುವ ಎಲ್ಲ ಮನೆ ಹಾಗೂ ಕುಟುಂಬಗಳ ಸಮೀಕ್ಷೆಯನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಬೇಕು. ಪ್ರತಿದಿನ ಸಂಜೆ ಅಂದಿನ ಸಮೀಕ್ಷೆ ಕಾರ್ಯದ ಪ್ರಗತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದರು.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಧಾರವಾಡ ಜಿಲ್ಲೆಯಲ್ಲಿ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಒಟ್ಟು 16 ದಿನಗಳ ಕಾಲ ಸಮೀಕ್ಷೆ ಮಾಡಲು ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 5 ಲಕ್ಷ 46 ಸಾವಿರ ಕುಟುಂಬಗಳನ್ನು ಗುರುತಿಸಲಾಗಿದೆ. ಇದನ್ನು ಹೆಸ್ಕಾಂ ಇಲಾಖೆ ಮುಖಾಂತರ ಪ್ರತಿಯೊಂದು ಮನೆಗೂ ಪ್ರತ್ಯೇಕವಾಗಿ ಐಡಿ ಕೊಡುವ ಮುಖಾಂತರ ಅದನ್ನು ಗುರುತಿಸಿ, 150 ರಿಂದ 200 ಮನೆಗಳನ್ನು ಒಂದು ಗುಂಪಾಗಿ ವಿಂಗಡಿಸಲಾಗಿದೆ. ಜಿಲ್ಲೆಯಲ್ಲಿ 4,880 ಸಮೀಕ್ಷಿಕರು ಮತ್ತು ಮೇಲ್ವಿಚಾರಣೆ ಮಾಡುವುದಕ್ಕೆ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರತಿ ಹಂತದಲ್ಲೂ ರಾಜ್ಯ, ಜಿಲ್ಲಾ, ಒಂದೊಂದು ಬ್ಲಾಕ್ ಮಟ್ಟದಲ್ಲಿ ತರಬೇತಿಯನ್ನು ನೀಡಲು ಮಾಸ್ಟರ್ ಟ್ರೈನರ್‌ಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಕೈ ಜೋಡಿಸಿ ಸಮೀಕ್ಷೆಯನ್ನು ಯಶಸ್ವಿ ಮಾಡಬೇಕು ಎಂದು ಹೇಳಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರೇ ಇಲ್ಲ; ಸಣ್ಣ ಚಿಕಿತ್ಸೆಗೂ ಪರದಾಡುತ್ತಿರುವ ರೋಗಿಗಳು!

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಭಾನುಮತಿ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ತಾಲೂಕು ವಿಸ್ತರಣಾ ಅಧಿಕಾರಿ ಸಂಜೀವ ಕೆಸರಿ, ಬ್ಲಾಕ್ ಮೇಲ್ವಿಚಾರಕರು, ನಿಲಯಪಾಲಕರು, ಸಮೀಕ್ಷಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X