ಧಾರವಾಡ | ಸೆ.22ರಿಂದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

Date:

Advertisements

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಕ್ರಿಯೆ ಆರಂಭಗೊಂಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಜನರಲ್ಲಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಮಿತ್ತ ದತ್ತಾಂಶ ಸಂಗ್ರಹಿಸಲು ರಾಜ್ಯ ಸರ್ಕಾರ ಈ ಸಮೀಕ್ಷೆ ಕೈಗೊಂಡಿದ್ದು, ಧಾರವಾಡ ಜಿಲ್ಲೆಯಲ್ಲಿ ಸೆ.22ರಿಂದ ಅ.7 ರವರೆಗೆ 4,880 ಗಣತಿದಾರರು ಹಾಗೂ 5,46,012 ಕುಟುಂಬಗಳ ಸಮೀಕ್ಷೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮೀಕ್ಷೆಯಲ್ಲಿ ಹಸ್ಕಾಂದಿಂದ ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಮನೆಮನೆಗೆ ಭೇಟಿ ನೀಡಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. 90 ದಿನಗಳ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಈ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಸಮೀಕ್ಷೆಯ ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ಮ್ಯಾಪಿಂಗ್ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಜಿಲ್ಲೆಯ ಪ್ರತಿಯೊಂದು ಮನೆಗಳನ್ನು ಎಣಿಸಿ, ಅನುಕ್ರಮ ಸಂಖ್ಯೆಯನ್ನು ನೀಡಲಾಗುವುದು. ವಿದ್ಯುತ್ ಸಂಪರ್ಕ ಹೊಂದಿರುವ ಎಲ್ಲಾ ಮನೆಗಳನ್ನು ಆರ್.ಆರ್. ಮೀಟರ್ ಸಂಖ್ಯೆಯ ಆಧಾರದ ಮೇಲೆ ಗುರುತಿಸಿ ಜನರ ಸಮೀಕ್ಷೆ ಕೈಗೊಳ್ಳಲಾಗುತ್ತಿರುವುದರಿಂದ ಯಾವುದೇ ಮನೆ ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವ ಸಾಧ್ಯತೆ ಇರುವುದಿಲ್ಲ” ಎಂದು ತಿಳಿಸಿದ್ದಾರೆ.

“ಎರಡನೇ ಹಂತದಲ್ಲಿ, ಸಮೀಕ್ಷೆಯ ಮುಖ್ಯ ಕಾರ್ಯವನ್ನು ವೈಜ್ಞಾನಿಕ ರೀತಿಯಲ್ಲಿ ನಡೆಸಲು ದಸರಾ ರಜೆಯ ಅವಧಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷೆ ನಡೆಸಲಾಗುವುದು. ಈ ಅವಧಿಯಲ್ಲಿ ಶಾಲಾ ರಜೆ ಇರುವುದರಿಂದ ಸಮೀಕ್ಷಾ ಕಾರ್ಯಕ್ಕೆ ಅನುಕೂಲವಾಗುವುದು. ಈ ಸಮೀಕ್ಷೆಗಾಗಿ ಇ-ಆಡಳಿತ ಹಾಗೂ ಇಂಧನ ಇಲಾಖೆಗಳಿಂದ ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ ಆಧಾರದ ಮೇಲೆ ವಿನ್ಯಾಸಗೊಳಿಸಿದ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟವಾದ ಆ್ಯಪ್ ಅಭಿವೃದ್ಧಿಪಡಿಸಿಲಾಗಿದೆ. ಮೀಟರ್ ರೀಡರ್‌ಗಳು ಸಂಗ್ರಹಿಸಿದ ಮನೆ ಪಟ್ಟಿ ಡೇಟಾವನ್ನು ಇಡಿಸಿಎಸ್ ಸರ್ವರ್‌ಗಳಲ್ಲಿ ಅಪ್‍ಲೋಡ್ ಮಾಡಲಾಗುವುದು. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ ಮೌಲೀಕರಿಸಿದ ಮನೆಪಟ್ಟಿ ಮ್ಯಾಪಿಂಗ್ ಮಾಡಲಾಗುತ್ತದೆ. ಅಭಿವೃದ್ದಿ ಪಡಿಸಲಾದ ಅಪ್ಲಿಕೇಷನ್‍ನಲ್ಲಿ ಮನೆಯ ಸ್ಥಳವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಅಪಾರ್ಟ್ ಮೆಂಟ್‍ಗಳು, ವಾಸ ಸ್ಥಳಗಳ ಕ್ಲಸ್ಟರ್ ಸೇರಿದಂತೆ ಪ್ರತಿ ಮನೆಗಳಿಗೆ ವಿಶಿಷ್ಟ (Unique Number) ಸಂಖ್ಯೆಯನ್ನು ನೀಡಲಾಗಿರುತ್ತದೆ. ವಿದ್ಯುತ್ ಬಿಲ್ಲ್ ನೀಡುವಾಗ ಮೀಟರ್ ರೀಡರ್‌ಗಳು ಆಗಸ್ಟ್ 23, 2025 ರಿಂದ ಪ್ರಾರಂಭಿಸಿ ಅಭಿವೃದ್ದಿ ಪಡಿಸಲಾದ ಆ್ಯಪ್‍ನಲ್ಲಿ ಮನೆಗಳ ಮಾಹಿತಿಯನ್ನು ದಾಖಲಿಸಿದ್ದಾರೆ. ಮತ್ತು ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡಿದ್ದಾರೆ. ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳ ಮತ್ತು ಇತರ ಎಲ್ಲಾ ಜನರ ದತ್ತಾಂಶಗಳನ್ನು ಸಂಗ್ರಹಿಸಲು ಉಪಯೋಗವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಧಾರವಾಡ ಜಿಲ್ಲೆಯಲ್ಲಿ ಅಂದಾಜು ಒಟ್ಟು 5,46,012 ಕುಟುಂಬಗಳಿವೆ. ಈ ಪೈಕಿ ಪ್ರತಿ 150 ಮನೆಗಳಿಗೆ ಒಂದು ಬ್ಲಾಕ್ ರಚನೆ ಮಾಡಿ, ಪ್ರತಿ ಬ್ಲಾಕ್‍ಗೆ ಒಬ್ಬ ಗಣತಿದಾರರಂತೆ ಜಿಲ್ಲೆಯಲ್ಲಿ ಒಟ್ಟು 4,880 ಗಣತಿದಾರರನ್ನು ನೇಮಿಸಲಾಗಿದೆ. ಪ್ರತಿ 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರಂತೆ ಒಟ್ಟು 244 ಮೇಲ್ವಿಚಾರಕರನ್ನು ಹಾಗೂ ಪ್ರತಿ 50 ಗಣತಿದಾರರಿಗೆ ಒಬ್ಬ ಮಾಸ್ಟರ್ ಟ್ರೆನರ್‍ರಂತೆ ಜಿಲ್ಲೆಯಲ್ಲಿ 87 ಮಾಸ್ಟರ್ ಟ್ರೇನರ್‍ಗಳನ್ನು ಗುರುತಿಸಿ, ತರಬೇತಿ ನೀಡಲಾಗಿದೆ. ರಾಜ್ಯ ಮಟ್ಟದಲ್ಲಿ 5 ಮಾಸ್ಟರ್ ಟ್ರೇನರ್‍ಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಮೀಕ್ಷಾ ಕಾರ್ಯಕ್ಕೆ ಮುಖ್ಯವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ-3,937 ಸಿಬ್ಬಂದಿಯವರನ್ನು, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ-238 ಸಿಬ್ಬಂದಿಯವರನ್ನು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ-326 ಸಿಬ್ಬಂದಿಯವರನ್ನು ಹಾಗೂ ಇತರೆ ಇಲಾಖೆಗಳಿಂದ 211 ಸಿಬ್ಬಂದಿಯವರನ್ನು ಸಮೀಕ್ಷಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

“ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು 60 ಪ್ರಶ್ನಾವಳಿಗಳ ಒಟ್ಟು 4.66 ಲಕ್ಷ ಮಾದರಿ ಕುಟುಂಬ ಅನುಸೂಚಿ ನಮೂನೆಗಳನ್ನು ಧಾರವಾಡ ಜಿಲ್ಲೆಗೆ ಹಂಚಿಕೆ ಮಾಡಲಾಗಿದೆ. ಸಮೀಕ್ಷೆಗೆ ಮಾಹಿತಿ ಒದಗಿಸಲು ಸಾರ್ವಜನಿಕರು ಯಾವ ದಾಖಲೆಗಳನ್ನು ಇರಿಸಿಕೊಂಡಿರಬೇಕು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ಭೇಟಿ ನೀಡಿದ್ದಾರೆ. ಸಮೀಕ್ಷೆಯ ಸಮಯದಲ್ಲಿ ಅವಶ್ಯವಿರುವ ಕುಟುಂಬ ಮುಖ್ಯಸ್ಥರ ವಿವರ, ರೇಷನ ಕಾರ್ಡ, ಆಧಾರ ಕಾರ್ಡ ಹಾಗೂ ಆಧಾರ ಕಾರ್ಡಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಕುಟುಂಬದ ಎಲ್ಲ ಸದಸ್ಯರ ಆಧಾರ ಸಂಖ್ಯೆ, ಚುನಾವಣಾ ಗುರುತಿನ ಚೀಟಿ, ವಿಶೇಷ ಚೇತನರಾಗಿದ್ದಲ್ಲಿ ಯು.ಡಿ.ಐ.ಡಿ. ನಂಬರ್, ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಿದ್ಯಾಭ್ಯಾಸದ ವಿವರಗಳು, ಮೀಸಲಾತಿ ಪಡೆದ ವಿವರಗಳು ಹಾಗೂ ಕೃಷಿ ಸಂಬಂಧಿಸಿದ ಚಟುವಟಿಕೆಗಳ ಮಾಹಿತಿಯನ್ನು ಮುಂಚಿತವಾಗಿ ತಯಾರಿಸಿಟ್ಟುಕೊಂಡು ಗಣತಿದಾರರಿಗೆ ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಒದಗಿಸಲು ಅನುಕೂಲವಾಗುವಂತೆ ಆಶಾ ಕಾರ್ಯಕರ್ತೆಯರಿಗೆ ನಮೂನೆಗಳನ್ನು ವಿತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ನಗರ ಪ್ರದೇಶಗಳಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಂದ ಕುಟುಂಬದ, ನೆರೆಹೊರೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಗೆ ಸಹಾಯವಾಗುವಂತೆ ಸಮೀಕ್ಷಾದಾರರಿಗೆ ಸಮೀಕ್ಷಾ ಕೈಪಿಡಿಯನ್ನು ನೀಡಲಾಗಿದೆ. ಈಗಾಗಲೇ ರಾಜ್ಯಮಟ್ಟದಲ್ಲಿ ಮಾಸ್ಟರ್ ಟ್ರೇನರ್‌ಗಳಿಗೆ ಸೆ. 12 ರಂದು ಜಿಲ್ಲಾ ಹಂತದಲ್ಲಿ ತರಬೇತಿ ನೀಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಎರಡು ಹಂತಗಳಲ್ಲಿ ಟ್ರೆನಿಂಗ್ ನೀಡಲಾಗುತ್ತಿದ್ದು, ಮೊದಲ ಹಂತದ ತರಬೇತಿ ಕಾರ್ಯಕ್ರಮ ಜರುಗಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X