ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು, ಸಂವಾದದಲ್ಲಿ ಸುಮಾರು 5000 ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.
ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರಾಮಾಣಿಕ ಪರಿಶ್ರಮದಿಂದ ಗುರಿ ಸಾಧಿಸಬಹುದು. ಎಲ್ಲ ಗೊಂದಲಗಳಿಂದ ಹೊರಬಂದು ಚನ್ನಾಗಿ ಓದಬೇಕು. ಅಂದಾಗ ಮಾತ್ರ ಅಂದುಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ಆರೋಪ; ಇಬ್ಬರು ಪಾಲಿಕೆ ಸಿಬ್ಬಂದಿ ಅಮಾನತು
ಕಾರ್ಯಾಗಾರದಲ್ಲಿ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.