ಧಾರವಾಡ | ಕ್ರೀಡಾ ಮನೋಭಾವವೇ ಜೀವನದ ಯಶಸ್ಸಿನ ಗುಟ್ಟು: ಸಂಗಮೇಶ ಬಬಲೇಶ್ವರ

Date:

ಇಂದಿನ ಯುವ ಕ್ರೀಡಾಪಟುಗಳು ನಮ್ಮ ರಾಷ್ಟ್ರದ ಸಾಧಕ ಕ್ರೀಡಾಪಟುಗಳ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸೋಲು ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾ ಮನೋಭಾವವೇ ಜೀವನದ ಯಶಸ್ಸಿನ ಗುಟ್ಟು. ಅದನ್ನು ಅರಿತು ನಡೆಯಬೇಕು ಎಂದು ಕರ್ನಾಟಕ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

- Advertisement -

ಧಾರವಾಡ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಮೇಜರ್ ಧ್ಯಾನ್‍ಚ್‍ಂದ ರವರ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಕ್ರೀಡೆಯಲ್ಲಿ ಯಾವುದೇ ಜಾತಿ, ಧರ್ಮದ ಕಟ್ಟಳೆಗಳಿಲ್ಲ, ಮೇಲು ಕೀಳು ಎಂಬ ಭೇದಭಾವ ಇಲ್ಲ, ಬಡವ ಶ್ರೀಮಂತ ಎಂಬುದಿಲ್ಲ. ಕ್ರೀಡಾ ಸಾಧಕರಿಗೆ, ಸ್ಪರ್ಧಾ ವಿಜೇತರಿಗೆ ಸಿನಿಮಾ ನಟಿಯರಿಗಿಂತ ಹೆಚ್ವು ಗೌರವ, ಅಭಿಮಾನವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, “ಪ್ರತಿಯೊಬ್ಬರಿಗೂ ಕ್ರೀಡಾ ಹವ್ಯಾಸವನ್ನು ಹೊಂದಿರಬೇಕು. ಸದೃಢ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಕ್ರೀಡಾಪಟುಗಳಿಗೆ ಆಹಾರದ ಉತ್ತಮ ಹವ್ಯಾಸಗಳು ಇರುತ್ತವೆ. ಯಾವುದೇ ದುಷ್ಚಟಗಳಿಗೆ ಅಂಟಿಕೊಳ್ಳಬಾರದು. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರಕ್ಕೆ ವಿಶ್ವಮಟ್ಟದಲ್ಲಿ ಉತ್ತಮ ಹೆಸರು, ಕೀರ್ತಿ ಇದೆ. ನಮ್ಮ ಕ್ರೀಡಾಪಟುಗಳು ಇನ್ನೂ ಹೆಚ್ವಿನ ಸಾಧನೆ ಮಾಡುವ ಮೂಲಕ ಧಾರವಾಡ ಜಿಲ್ಲೆಗೆ ಕೀರ್ತಿ ತರಬೇಕೆಂದು” ತಿಳಿಸಿದರು.

ಇದನ್ನೂ ಓದಿ: ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...