ಧಾರವಾಡ | ಸಂಘಟಿತ ಅಪರಾಧ ಕೃತ್ಯ, ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಠಿಣ ಪೊಲೀಸ್ ಕ್ರಮ ಅಗತ್ಯ: ಸಚಿವ ಸಂತೋಷ್ ಲಾಡ್

Date:

Advertisements

ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಿ ಇದರಲ್ಲಿ ಭಾಗವಹಿಸುವ ಮತ್ತು ಪ್ರೇರೆಪಿಸುವ ದುಷ್ಟ ವ್ಯಕ್ತಿ, ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಆಯೋಜಿಸದ್ದ ಪೊಲೀಸ್, ಅಬಕಾರಿ, ರಾಷ್ಟ್ರೀಯ ಹೆದ್ದಾರಿ, ಲೋಕೋಪೋಯೋಗಿ ಇಲಾಖೆ ಅಧಿಕಾರಿಗಳ ಸಭೆ ಜರುಗಿಸಿ, ಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದರು.

“ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕೆಲಸ ಮಾಡಬೇಕು. ಪ್ರತಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಜನ ಸ್ನೇಹಿಯಾಗಿ ವರ್ತಿಸಬೇಕು” ಎಂದು ಹೇಳಿದರು.

Advertisements

“ಯುವಸಮೂಹವನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಪೊಲೀಸ್ ಇಲಾಖೆ ಗಮನ ಹರಿಸಿ ಇಂತಹ ಕೃತ್ಯಗಳಲ್ಲಿ ಭಾಗವಹಿಸುವವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ಹಾನಿ ಹಾಗೂ ಅಪರಾಧ ಕೃತ್ಯದ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ತಿಳಿಸಿದರು.

“ಅವಳಿ ನಗರದಲ್ಲಿ ನೂರಾರಕ್ಕೂ ಹೆಚ್ಚು ಕಾಲೇಜುಗಳಿವೆ. ಎಂಜಿನಿಯರಿಂಗ್, ಡೆಂಟಲ್, ವೈದ್ಯಕೀಯ, ಕಾಲೇಜುಗಳ ಸುತ್ತಮುತ್ತ ಹಾಗೂ ಹಾಸ್ಟೆಲ್‍ಗಳಲ್ಲಿ ಮಫ್ತಿಯಲ್ಲಿ ಹಾಗೂ ಅನಿರೀಕ್ಷಿತ ಭೇಟಿ ಕೈಗೊಂಡು ಅಪರಾಧ ಕೃತ್ಯಗಳ ಬಗ್ಗೆ ತೀವ್ರನಿಗಾ ವಹಿಸಬೇಕು. ಯುವಪೀಳಿಗೆ ದಾರಿ ತಪ್ಪದಂತೆ ಪೊಲೀಸ್ ಇಲಾಖೆ ಪ್ರಬಲ ಅಸ್ತ್ರವಾಗಬೇಕು. ಇಂದಿನ ಈ ಸಭೆಯು ಸಲಹಾತ್ಮಕ ಮಾರ್ಗದರ್ಶಿ ಸಭೆಯಾಗಿದ್ದು, ಮುಂಬರುವ ದಿನಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಡ್ರಗ್ಸ್, ಸಂಘಟಿತ ಅಪರಾಧ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರತ್ಯಕ ಸಭೆ ಜರುಗಿಸಲಾಗುವುದು” ಎಂದು ಸಚಿವರು ತಿಳಿಸಿದರು.

“ಅಬಕಾರಿ ಇಲಾಖೆ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಮಕ್ಕಳು ಮದ್ಯ ಮಾರಾಟ ಹಾಗೂ ಸೇವನೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಮದ್ಯ ಮಾರಾಟ ಲೈಸನ್ಸ್‍ದಾರರು ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವುದು ಬೇಡ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಅಧಿಕಾರಿಗಳು ತಕ್ಷಣ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಲೈಸನ್ಸ್ ರದ್ದು ಪಡಿಸಲು ಕ್ರಮ ವಹಿಸಬೇಕೆಂದು ಸಚಿವರು ಸೂಚಿಸಿದರು.

“ಜಿಲ್ಲೆಯಲ್ಲಿ ಸಂಘಟಿತ ಅಪರಾಧಗಳನ್ನು ತಡೆಯಬೇಕು. ಮಾದಕ ವಸ್ತುಗಳ ಮಾರಾಟವನ್ನು ನಿಯಂತ್ರಿಸಬೇಕು ಮತ್ತು ಅವಳಿನಗರದ ಸಂಚಾರ ವ್ಯವಸ್ಥೆ ಸುಗಮವಾಗಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ನಮ್ಮ ಕಡೆಯಿಂದ ನೀಡಲಾಗುವುದು” ಎಂದರು.

“ಈ ಕಾರ್ಯಗಳನ್ನು ಅಧಿಕಾರಿಗಳು ಕೇವಲ ಕರ್ತವ್ಯವೆಂದು ಭಾವಿಸದೆ, ಹೃದಯದಿಂದ ನಮ್ಮ ಜಿಲ್ಲೆ ಅಭಿಮಾನದಿಂದ ಮಾಡುವ ಮೂಲಕ ಇತರ ಜಿಲ್ಲೆಗಳಿಗೆ ಧಾರವಾಡ ಜಿಲ್ಲೆ ಮಾದರಿ ಜಿಲ್ಲೆಯಾಗುವಂತೆ ಮಾಡಬೇಕು” ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, “ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವುದನ್ನು ನಿಯಂತ್ರಿಸಿ, ಹಲವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಹಾಗೂ ಮಹಾನಗರ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಗಸ್ತು ಹೆಚ್ಚಿಸಲಾಗಿದೆ. ಅಪರಾಧ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಸಂಚಾರಿ ವ್ಯವಸ್ಥೆ ಸುಧಾರಣೆಗೆ ಪೊಲೀಸ್ ಇಲಾಖೆ ಶ್ರಮಿಸುತ್ತಿದೆ” ಎಂದು ಹೇಳಿದರು.

ಮಹಾನಗರ ಪೊಲೀಸ್ ಆಯುಕ್ತ ಸಂತೋಷ ಬಾಬು ಮಾತನಾಡಿ, “ಮಹಾನಗರ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಟ್ ವ್ಯವಸ್ಥೆಯನ್ನು ಬಿಗಿಗೊಳಿಸಿ, ಪ್ರತಿ ಪೊಲೀಸ್ ಸಿಬ್ಬಂದಿ ತನಗೆ ನೀಡಿರುವ ಬಿಟಟ್‌ನಲ್ಲಿ ಸಮಗ್ರ ಅವಲೋಕನ ಮಾಡಿ, ಕಡ್ಡಾಯವಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ಮಹಾನಗರದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ಇಲಾಖೆಯಿಂದ ಸಾಕಷ್ಟು ಮಾಹಿತಿ ನೀಡಿ, ಜಾಗೃತಿಗೊಳಿಸಲಾಗಿದೆ. ಆದರೂ ಹಲವು ರೀತಿಯ ಆಮಿಷಗಳಿಗೆ ಒಳಗಾಗಿ ಹಣ, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಅಪರಾಧ ಜರುಗಿದ ತಕ್ಷಣ ಮಾಹಿತಿ ನೀಡಿದರೆ, ಪ್ರಕರಣ ಬೇಧಿಸಿ, ಅಪರಾಧಿಗಳನ್ನು ಪತ್ತೆಹಚ್ಚಬಹುದು ಮತ್ತು ಸ್ವತ್ತು ರಕ್ಷಿಸಬಹುದು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾತನಾಡಿ, “ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪೊಲೀಸ್ ಸಂಚಾರ ತೀವೃಗೊಳಿಸಲಾಗಿದೆ. ಅಪರಾಧ ಘಟಿಸಿದ ವೇಳೆ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿದ ಕೂಡಲೇ ಸ್ಪಂಧಿಸಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಅಬಕಾರಿ ಇಲಾಖೆಯೊಂದಿಗೆ ಜಂಟಿ ದಾಳಿ ನಡೆಸಿ, ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಹೆದ್ದಾರಿ ವಿಸ್ತೀರ್ಣ, ಕೆಳಸೇತುವೆಗಳ ನಿರ್ಮಾಣ ಮತ್ತು ಹೆದ್ದಾರಿ ಪಕ್ಕದ ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಿಸುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಉಪ ಪೊಲೀಸ್ ಆಯುಕ್ತ ಡಾ.ಗೋಪಾಲ ಬ್ಯಾಕೋಡ್ ಮಾತನಾಡಿ, “ಮಹಾನಗರ ವ್ಯಾಪ್ತಿಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ 74 ವಿವಿಧ ರೀತಿಯ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 33 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಉಳಿದ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ” ಎಂದು ಅವರು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ್ ಉಳ್ಳಾಗಡ್ಡಿ, ಅಬಕಾರಿ ಇಲಾಖೆ ಉಪ ಆಯುಕ್ತ ಕೆ ಪ್ರಶಾಂತಕುಮಾರ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶಶಿಧರ ಚನ್ನಪ್ಪ ಗೌಡರ, ವಿಶ್ವಜ್ಞ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಪೊಲೀಸ್, ಅಬಕಾರಿ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X