ಧಾರವಾಡ | ಸೆಪ್ಟೆಂಬರ್‌ 1, 2, 3 ರಂದು ವಿದ್ಯಾರ್ಥಿ ಸಮ್ಮೇಳನ

Date:

ತುಮಕೂರಿನಲ್ಲಿ ಸೆಪ್ಟೆಂಬರ್‌ 1, 2 ಮತ್ತು 3 ರಂದು ನಡೆಯಲಿರುವ ವಿದ್ಯಾರ್ಥಿ ಸಮ್ಮೇಳನದಲ್ಲಿ ಧಾರವಾಡದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎಐಡಿಎಸ್‌ಒ ಧಾರವಾಡ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ ತಿಳಿಸಿದರು.

- Advertisement -

8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ ಕುರಿತು ಧಾರವಾಡದ ಹಲವು ಶಾಲಾ ಕಾಲೇಜುಗಳಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಶಿಕ್ಷಣವೆಂದರೆ ಅಗಾಧ ಪ್ರಮಾಣದ ಮಾಹಿತಿಯನ್ನು ಮೆದುಳೊಳಗೆ ತುಂಬಿಕೊಂಡು, ಜೀವನವಿಡೀ ಜೀರ್ಣವೇ ಆಗದಂತೆ ಅಲ್ಲಿಯೇ ಕೊಳೆಸುವಂತಹದ್ದಲ್ಲ. ನಮಗೆ ಜೀವನವನ್ನು ಕಟ್ಟಿಕೊಳ್ಳುವ, ಮನುಷ್ಯರನ್ನಾಗಿಸುವ ಮೌಲ್ಯಗಳನ್ನು ಬೆಳೆಸುವ ಎಲ್ಲ ವಿಚಾರಗಳನ್ನು ಸಮೀಕರಿಸುವಂತಹ ಶಿಕ್ಷಣ ಬೇಕು. ಶಿಕ್ಷವು ಕೇವಲ ಮಾಹಿತಿ ಎಂದಾಗಿಬಿಟ್ಟರೆ, ಗಂಥಾಲಯಗಳೇ ಪ್ರಪಂಚದ ಮಹಾನ್ ಸಂತರುಗಳಾಗಿ ಮತ್ತು ವಿಶ್ವಕೋಶವೇ ಋಷಿಗಳಾಗಿರುತ್ತಿದ್ದವು” ಎಂದು ತಿಳಿಸಿದರು.

“ಶಿಕ್ಷಣದ ಗುರಿ ಮತ್ತು ಮಹತ್ವದ ಕುರಿತು ವಿವೇಕಾನಂದರು ಈ ರೀತಿ ಹೇಳುತ್ತಾರೆ. ಅಂತೆಯೇ, ನಮ್ಮ ದೇಶದ ನವೋದಯ ಚಿಂತಕ ಈಶ್ವರಚಂದ್ರ ವಿದ್ಯಾಸಾಗರ್, ರಾಜಾರಾಮ್ ಮೋಹನ್ ರಾಯ್, ಜ್ಯೋತಿ ಬಾ ಫುಲೆ, ಸಾವಿತ್ರಿಬಾಯಿ ಫುಲೆಯವರು ವೈಜ್ಞಾನಿಕ, ಪ್ರಜಾತಾಂತ್ರಿಕ ಹಾಗೂ ಧರ್ಮನಿರಪೇಕ್ಷ ಶಿಕ್ಷಣ ನಮ್ಮದಾಗಬೇಕು ಎಂಬ ಮಹತ್ತರ ಆಶಯಗಳನ್ನು ಹೊಂದಿದ್ದರು. ಅಪ್ರತಿಮ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರು ಈ ಮೇಲಿನ ಆಶಯಗಳನ್ನು ಎತ್ತಿ ಹಿಡಿಯುತ್ತಾ, ಮುಂದುವರೆದು ಶಿಕ್ಷಣಕ್ಕೆ ಹಣ ಒದಗಿಸುವ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಹೇಳಿದ್ದರು. ಒಟ್ಟಾರೆಯಾಗಿ ಶಿಕ್ಷಣ ಎಂಬುದು ಹುಟ್ಟುವ ಪ್ರತಿಯೊಂದು ಮಗುವಿನ ಹಕ್ಕು ಎನ್ನುವುದು ಕೇವಲ ಮಾತಾಗಿ ಉಳಿಯದೆ, ಕ್ರಿಯೆಯಲ್ಲಿ ಅದನ್ನು ಅನುಷ್ಠಾನಕ್ಕೆ ತರಲು ಶ್ರಮಿಸಿದ್ದರು” ಎಂದರು.

“ಪ್ರಸ್ತುತ ಶಿಕ್ಷಣವು ಈ ಎಲ್ಲ ಆಶಯಗಳಿಂದ ಕ್ರಮೇಣ ದೂರವಾಗುತ್ತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಶೈಕ್ಷಣಿಕ ವಲಯವನ್ನು ಅಭಿವೃದ್ಧಿಗೊಳಿಸಿ, ಕಡೆಯ ಮಗುವಿಗೂ ಶಿಕ್ಷಣ ದಕ್ಕುವಂತೆ ಮಾಡುವುದು ಅವರ ಆದ್ಯತೆಯಾಗಿ ಉಳಿದಿಲ್ಲ. ಬದಲಿಗೆ, ಸರ್ಕಾರವು ತನ್ನ ಶೈಕ್ಷಣಿಕ ನೀತಿ-ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ. ಒಂದೆಡೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಪೂರ್ಣ ನಿರ್ವಹಣೆ, ಹಣ ಒದಗಿಸುವ, ಮೂಲ ಸೌಕರ್ಯಗಳನ್ನು ನೀಡುವ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸುವ ತನ್ನ ಮುಖ್ಯ ಕರ್ತವ್ಯಗಳಿಂದ ಸರ್ಕಾರವು ತಪ್ಪಿಸಿಕೊಳ್ಳುತ್ತಿದ್ದು, ಮತ್ತೊಂದೆಡೆ ಎನ್‌ಇಪಿ -2020, ಸ್ವಯಂ ಹಣಕಾಸು ಸಂಸ್ಥೆಗಳು(ಕಾಲೇಜು ನಡೆಸಲು ವಿದ್ಯಾರ್ಥಿಗಳಿಂದಲೇ ಪೂರ್ತಿ ಹಣ ಪಡೆಯುವುದು), ಸರ್ಕಾರಿ ಶಾಲೆಗಳ ವಿಲೀನ (ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಮುಚ್ಚುವುದು), ನಾಲ್ಕು ವರ್ಷಗಳ ಪದವಿ ಕೋರ್ಸ್ ಮುಂತಾದ ಹತ್ತು ಹಲವು ನೀತಿಗಳ ಮೂಲಕ ಸರ್ಕಾರವು ಶಿಕ್ಷಣವನ್ನು ಖಾಸಗಿ ಮಡಿಲಿಗೆ ಹಾಕಿ, ಲಕ್ಷಾಂತರ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ತಳ್ಳುತ್ತಿದೆ” ಎಂದು ಆರೋಪಿಸಿದರು.

“ನವೋದಯ ಚಿಂತಕರು ಹಾಗೂ ಕ್ರಾಂತಿಕಾರಿಗಳ ಆಶಯವನ್ನು ನಾವು ಪೂರ್ಣಗೊಳಿಸಬೇಕು. ಈ ವಿದ್ಯಾರ್ಥಿ ಸಮ್ಮೇಳನದ ಮೂಲಕ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಪ್ರಬಲ ಸಂಘಟಿತ ಹೋರಾಟಗಳನ್ನು ಬೆಳೆಸುವ ಸಂಕಲ್ಪವನ್ನು ತೊಡಬೇಕು. ಎಲ್ಲಿಯವರೆಗೂ ಶಿಕ್ಷಣವು ಸರ್ಕಾರಗಳ ಆದ್ಯತೆ ಆಗುವದಿಲ್ಲವೋ, ಅಲ್ಲಿಯವರೆಗೂ ನಮ್ಮ ಮೂಲ ಸೌಕರ್ಯ, ಹಕ್ಕುಗಳನ್ನು ಹೋರಾಟದ ಮೂಲಕವೇ ನಾವು ಪಡೆದುಕೊಳ್ಳಬೇಕು” ಎಂದು ಅಮಸಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ಕಲಿಕೆ | ವಿದ್ಯಾರ್ಥಿಗಳಿಗಿಂತ ಅಧ್ಯಾಪಕ ಹೆಚ್ಚು ಕೆಲಸ ಮಾಡಬೇಕಾಗುತ್ತದೆ: ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ

“ಸೆಪ್ಟೆಂಬರ್ ‌1, 2 ಮತ್ತು 3ರಂದು ತುಮಕೂರಿನಲ್ಲಿ ಸಂಘಟಿಸಿರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ. ಈ ಜವಾಬ್ದಾರಿಯನ್ನು ರಾಜ್ಯದ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಮತ್ತು ದೃಢ ನಿಶ್ಚಯದೊಂದಿಗೆ ನಿಭಾಯಿಸಿ, ರಾಜ್ಯದಲ್ಲಿ ವಿದ್ಯಾರ್ಥಿ ಚಳುವಳಿಯನ್ನು ಮುನ್ನಡೆಸುವರೆಂಬ ವಿಶ್ವಾಸ ನಮಗಿದೆ” ಎಂದರು.

ಸಮ್ಮೇಳನದ ಬೇಡಿಕೆಗಳು:

  1. ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಬೇಕು.
  2. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು.
  3. ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸಬೇಕು.
  4. ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್‌ ಸೌಲಭ್ಯಗಳನ್ನು ಖಾತ್ರಿ ಪಡಿಸಬೇಕು.
  5. ಎನ್‌ಇಪಿ-2020ರ ಅಪ್ರಜಾತಾಂತ್ರಿಕ ಹೇರಿಕೆಯನ್ನು ಕೈಬಿಡಬೇಕು.
  6. ಸ್ವಯಂ ಹಣಕಾಸು ಸಂಸ್ಥೆಗಳನ್ನು ನಿಲ್ಲಿಸಿ, ತಾರತಮ್ಯವಿಲ್ಲದೆ ಎಲ್ಲ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು.
  7. ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು.
  8. ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಎಐಡಿಎಸ್‌ಒ ಧಾರವಾಡ ಜಿಲ್ಲಾ ಸಮಿತಿ ಪರವಾಗಿ ಶಶಿಕಲಾ ಮೇಟಿ ಒತ್ತಾಯಿಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...