ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

Date:

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ವಿದ್ಯಾರ್ಥಿಯನ್ನು ಆತನ ಸ್ವಂತ ಊರು ಲಕ್ಷ್ಮೇಶ್ವರದಲ್ಲಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಪ್ರತಿಷ್ಠಿತ ಸಂಸ್ಥೆಯ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಒಂದು ವಾರದ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಖಾದರ್ ಭಾಷಾ ಮೇಲೆ ಮೂರು ಜನ ವಾರ್ಡನ್‌ಗಳು ರಾತ್ರಿ ಕುಡಿದ ಅಮಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಲ್ಲೆಯಿಂದ ವಿದ್ಯಾರ್ಥಿಗೆ ಬಲವಾದ ಪೆಟ್ಟು ತಗುಲಿದ್ದು, ಧಾರವಾಡದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ತಿಳಿಸಿದ್ದರು. ವಿದ್ಯಾರ್ಥಿಯ ತಂದೆ ಇಸಾಕ್ ಭಾಷಾ ಹರಪನಹಳ್ಳಿ ಮಗನನ್ನುಲಕ್ಷ್ಮೇಶ್ವರಕ್ಕೆ ಕರೆತಂದು ಬಾಲಾಜಿ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ವರದಿಯ ದೂರು ಬಂದರೂ ಉಪನಗರದ ಪೊಲೀಸರು ಮಾತ್ರ ಕಾಲೇಜಿನ ಸಿಬ್ಬಂದಿಯನ್ನು ಹಾಗೂ ಹಲ್ಲೆಗೊಳಗಾದ ವಿದ್ಯಾರ್ಥಿಯ ಪಾಲಕರನ್ನು ವಿಚಾರಿಸಿಲ್ಲ. ಅಲ್ಲದೇ ಕಾಲೇಜಿನ ಆಡಳಿತ ಮಂಡಳಿ ಜಾಣ ಕುರುಡರಂತೆ ವರ್ತಿಸುತ್ತಿದೆ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...

ವಿಜಯಪುರ | ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳನ್ನು ತಿರಸ್ಕರಿಸಿ: ಸುನೀತ್‌ಕುಮಾರ

ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ,...

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ,...

ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ...