ಧಾರವಾಡ | ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳಿಗೆ ಪರದಾಟ

Date:

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಎದುರಾಗಿದೆ.

- Advertisement -

ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಲ್ಲದೆ ಮಕ್ಕಳು ಪ್ರತಿನಿತ್ಯ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಲಘಟಗಿ ಪಟ್ಟಣದಲ್ಲಿರುವ ಸರ್ಕಾರಿ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮತ್ತು ಸಕಾರ್ರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು ಒಂದು ಸಾವಿರ ಮಂದಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಕಳೆದ ನಾಲ್ಕೈದು ತಿಂಗಳುಗಳಿಂದಲೂ ಇಲ್ಲಿನ ಶಾಲಾ ಮಕ್ಕಳಿಗೆ ಸಮರ್ಪಕವಾಗಿ ಕುಡಿಯಲು ನೀರಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಶಾಲೆಗಳಲ್ಲಿ ಪಟ್ಟಣ ಪಂಚಾಯಿತಿ ನಳದಿಂದ ನೀರನ್ನು ಸಂಗ್ರಹಿಸಿ ಇಡಲಾಗುತ್ತಿದ್ದು, ಒಂದೆರೆಡು ದಿನಗಳಲ್ಲಿ ನೀರು ಖಾಲಿಯಾಗುತ್ತದೆ. ಪರಿಣಾಮ ಊಟ ಮಾಡಿದ ಮಕ್ಕಳಿಗೆ ಕುಡಿಯಲು ನೀರಿಲ್ಲದೆ ಮನೆಯಿಂದಲೇ ನೀರು ತರುವಂತಹ ಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬಕ್ರೀದ್ ದಿನ ಮದ್ಯ ಮಾರಾಟ ನಿಷೇಧ; ಜಿಲ್ಲಾಧಿಕಾರಿ ಆದೇಶ

“ಒಂದೊಂದು ದಿನ ನೀರು ಬರದೆ ಶೌಚಾಲಯಕ್ಕೂ ನೀರಿಲ್ಲದೆ ಮಕ್ಕಳು ಪರದಾಡುವಂತಾಗಿದೆ. ಇನ್ನು ಶಾಸಕರು ಮಾದರಿ ಶಾಲಾ ಆವರಣದಲ್ಲಿ ಕೊಳವೆ ಭಾವಿಯನ್ನು ಕೊರೆಸಿ 6 ತಿಂಗಳು ಕಳೆದರೂ ಅದಕ್ಕೆ ವಿದ್ಯುತ್ ಹಾಗೂ ಪೈಪ್‍ಲೈನ್ ಸಂಪರ್ಕವನ್ನೂ ಕಲ್ಪಿಸಿಲ್ಲ. ಈ ಕನೆಕ್ಷನ್ ಕೊಟ್ಟರೆ ತಕ್ಕ ಮಟ್ಟಿಗೆ ನೀರಿನ ಸಮಸ್ಯೆ ಬಗೆಹರಿಸಿದಂತಾಗುತ್ತದೆ” ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

“ಮಕ್ಕಳಿಗೆ ಬಂದೊದಗಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕೂಡಲೆ ಕ್ರಮಕೈಗೊಳ್ಳಬೇಕು. ಕ್ಷೇತ್ರದ ಸಚಿವ ಸಂತೋಷ್‌ ಲಾಡ್ ಅವರು ಮಕ್ಕಳ ಭವಿಷ್ಯವನ್ನು ಗಮನಿಸುವುದು ಅಗತ್ಯವಾಗಿದೆ” ಎಂದು ಒತ್ತಾಯಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...