ಧಾರವಾಡ | ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ವೀರಣ್ಣ ಒಡ್ಡೀನ

Date:

ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ಶಾಲಾ ಚಟುವಟಿಕೆಯಲ್ಲಿ ಪಾಲ್ಗೊಂಡು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ; ಆದರ್ಶ ವಿದ್ಯಾರ್ಥಿಯ ಸೊತ್ತು. ವಿದ್ಯಾರ್ಥಿಗಳು ಜೀವನದಲ್ಲಿ ಕೀಳು ಅಭಿರುಚಿಗಳನ್ನು ತ್ಯಜಿಸಿ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ದೇಶದ ಉಜ್ವಲ ಭವಿಷ್ಯ ನಿಮ್ಮನ್ನೆ ಅವಲಂಭಿಸಿದೆ ಎಂದು ನಿವೃತ್ತ ಮುಖ್ಯಾಧ್ಯಾಪಕ ವೀರಣ್ಣ ಒಡ್ಡೀನ ಹೇಳಿದರು.

- Advertisement -

ಮಾಳಾಪೂರದ ಗುಬ್ಬಚ್ಚಿಗೂಡು ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ವರ್ತಮಾನ ಕಾಲದ ವಿದ್ಯಾರ್ಥಿಗಳಾದ ತಾವು ಮುಂದೆ ಭವಿಷ್ಯತ್ ಕಾಲದ ನಾಯಕರಾಗುವವರು. ದೇಶದ ನಿಜವಾದ ಸಂಪತ್ತು ನೀವೇ. ನಿಮ್ಮ ಬಾಲ್ಯ ಸಂತಸದಾಯಕವಾಗಿರಬೇಕು. ಮಕ್ಕಳು ಈ ನಾಡಿನ ಭಾಗ್ಯೋದಯದ ಶಿಲ್ಪಿಗಳು. ವಿದ್ಯಾರ್ಥಿ ಜೀವನ ಒಂದು ತಪಸ್ಸು ಎಂದು ತಿಳಿದು ಸಮಯ ಪ್ರಜ್ಞೆಯೊಂದಿಗೆ ಅಧ್ಯಯನ ಮಾಡಬೇಕು. ಶಾಲೆ ನನ್ನದು, ಗುರುಗಳು ನನ್ನವರು ಎಂಬ ಅಭಿಮಾನ ನಿಮ್ಮಲ್ಲಿರಬೇಕು.ಕಲಿಸಿದ ಗುರುಗಳನ್ನು, ಪಾಲಕರನ್ನು, ಹಿರಿಯರನ್ನು ಗೌರವದಿಂದ ಕಾಣಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸನ್ಮಾನ ಸ್ವೀಕರಿಸಿದ ಸುನಿತಾ ಗುಡ್ಡಿನ ಮಾತನಾಡಿ, ರಾಷ್ಟ್ರ ನಾಯಕರ ಜೀವನ ಶೈಲಿಯೇ ವಿದ್ಯಾರ್ಥಿಗಳಿಗೆ ಮಾದರಿ. ಅವರ ಜೀವನದ ಮೌಲ್ಯಗಳು ನಿಮ್ಮ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯೆ ನೀಡಿದ ಸಂಸ್ಥೆಯ ಋಣವನ್ನು ವಿದ್ಯಾರ್ಥಿಗಳು ತೀರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ ಧಾರವಾಡ | ಆರ್ಥಿಕವಾಗಿ ಕಷ್ಟದಲ್ಲಿರುವ ವಿದ್ಯಾವರ್ಧಕ ಸಂಘಕ್ಕೆ ಸರಕಾರ ಸೌಲಭ್ಯ ಒದಗಿಸಲಿ: ದಾನಪ್ಪ ಕಬ್ಬೇರ

ಗುಬ್ಬಚ್ಚಿ ಗೂಡು ಶಾಲೆಯ ಅಧ್ಯಕ್ಷ ಶಂಕರ ಹಲಗತ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳಿಂದ ವೈವಿಧ್ಯಮಯವಾದ ಕಾರ್ಯಕ್ರಮಗಳು ಜರುಗಿದವು. ವಿಜ್ಞಾನ ನಾಟಕದಲ್ಲಿ ಸಾಧನೆ ಮಾಡಿದ ಅಪ್ರೋಜ ಜಾಲಗಾರ, ಚಂದನಾ ದಿವಟಗಿ, ಶಿಲ್ಪಾ ನಲವಡಿ, ಶಿವಾನಂದ ದೊಡಮನಿ, ತೇಜಸ್ವಿನಿ ಅವರನ್ನು ಸನ್ಮಾನಿಸಿದರು. ಮುಖ್ಯ ಶಿಕ್ಷಕಿ ಲಕ್ಷ್ಮೀ ಜಾಧವ ಸ್ವಾಗತಿಸಿದರು. ದಿಲ್‌ಷಾದ ಕಳಮಡ್ಡಿ ನಿರ್ವಹಿಸಿದರು. ಸಿಕಂದರ ದಂಡಿನ ವಂದಿಸಿದರು. ಕಾರ್ಯಕ್ರಮದಲ್ಲಿ ಭಾರತಿ ಸಾಬಳೆ, ಲಕ್ಶ್ಮಣ ತಿಕ್ಕುಂಡಿ, ವಿದ್ಯಾರ್ಥಿಗಳು, ಶಿಕ್ಷಕರು, ಮಕ್ಕಳ ಪಾಲಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...