ಭೂಗೋಳ ಶಾಸ್ತ್ರದಲ್ಲಿ ಇತ್ತೀಚಿನ ಬೆಳವಣಿಗೆ ಕುರಿತು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ಭಾವಿ ಜೀವನವನ್ನು ಉತ್ತಮ ಗೊಳಿಸಿಕೊಳ್ಳಬೇಕು. ಪಾಲಕರಿಗೆ ಸಹಾಯ ಮತ್ತು ಅವರ ಜೀವನ ಮಟ್ಟ ಸುಧಾರಿಸಲು ಪ್ರಯತ್ನಿಶೀಲರಾಗಬೇಕು. ವಿದ್ಯಾರ್ಥಿಗಳು ಜೀವನದ ಮೌಲ್ಯಗಳ ಬಗ್ಗೆ ತಿಳಿದುಕೊಂಡಿರಬೇಕು. ಭೂಗೋಳ ಶಾಸ್ತ್ರದ ಅಧ್ಯಯನದಿಂದ ಜೀವನಮಟ್ಟ ಉತ್ತಮಗೊಳ್ಳುತ್ತದೆ ಎಂದು ಅಂಜುಮನ್ ಕಾಲೇಜಿನಲ್ಲಿ ಆಯೋಜಿಸಿದ್ದ “ರೀಸೆಂಟ್ ಟ್ರೆಂಡ್ಸ್ ಇನ್ ಜಾಗ್ರಫಿ (Recent Trends in Geography)” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಡಾ. ಡಿ ಬಿ ಅಂಗಡಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಐ ಎ ಮುಲ್ಲಾ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕುಮಾರಿ ಸಬೀಹಾ ಕಾಜಿ ಕುರಾನ್ ಪಠಣ ಮಾಡಿದರು. ಆಕಾಂಕ್ಷ ಶ್ಲೋಕ ಪಠಿಸಿದರು. ಡಾ. ಎನ್ ಬಿ ನಾಲತವಾಡ ಮುಖ್ಯ ಅತಿಥಿಗಳ ಸ್ವಾಗತ ಮತ್ತು ಪರಿಚಯ ಮಾಡಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ
ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ ಎ ಮುಲ್ಲಾ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ಗಿರೀಶ್ ಚೌಡಪ್ನವರ್ ವಂದಿಸಿದರು.