ಧಾರವಾಡ | ಟೆನ್ನಿಸ್ ಪಂದ್ಯಾವಳಿ; 300ಕ್ಕೂ ಹೆಚ್ಚು ಆಟಗಾರರು ಭಾಗಿ; ಇದು ಜಿಲ್ಲೆಯ ಹೆಮ್ಮೆ: ಸಂತೋಷ್ ಲಾಡ್

Date:

ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ವಿವಿಧ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಮತ್ತು ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

- Advertisement -

ಅವರು ಧಾರವಾಡ ಡಿಡಿಎಲ್‍ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‍ದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಮಾತನಾಡುತ್ತಾ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಧಾರವಾಡ ಇದೀಗ ಟೆನ್ನಿಸ್ ಕ್ರೀಡೆಯಲ್ಲಿಯೂ ಮುಂಚೂಣಿಗೆ ಬರುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್’ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ. ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾವೆಲ್ಲರೂ ಬದ್ಧರಾಗಿದ್ದೇವೆ. ಧಾರವಾಡದಲ್ಲಿ ಕ್ರೀಡಾ ವಾತಾವರಣವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮಹತ್ವದ್ದು, ಇದರಿಂದಾಗಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
FB IMG 1762526016889

ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ಧಾರವಾಡವು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ. ಕ್ರೀಡಾ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಸಂತೋಷ ತಂದಿದೆ. ಧಾರವಾಡವು ಕ್ರೀಡೆಯ ಚುಕ್ಕಾಣಿಯನ್ನು ಹಿಡಿದಿದೆ. ಕ್ರೀಡಾ ಕ್ಷೇತ್ರದಲ್ಲಿ ಧಾರವಾಡದ ಯುವಜನರು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಜಿಮ್ ಖಾನಾ ಕ್ಲಬ್‍ನ ಸಮಗ್ರ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು. ಈ ಕ್ಲಬ್ ಬ್ರಿಟಿಷರ ಕಾಲದಿಂದಲೂ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ ಇದರ ಅಭಿವೃದ್ಧಿಪಡಿಸಬೇಕು.

ಹುಬ್ಬಳ್ಳಿಯಲ್ಲಿ ಜಗತ್ತಿನ ಅಂತರಾಷ್ಟ್ರೀಯ ಆಟಗಳನ್ನು ಆಡಲು ಸೂಕ್ತವಾದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ನಮ್ಮ ಭಾಗದ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಬೆಂಗಳೂರಿಗೆ ಹೋಗುವ ಅನಿವಾರ್ಯತೆ ತಪ್ಪುತ್ತದೆ, ಬೆಂಗಳೂರಿನಲ್ಲಿರುವ ಕ್ರೀಡಾಂಗಣಗಳ ಮಾದರಿಯಲ್ಲಿ, ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಕ್ರೀಡಾಂಗಣವನ್ನು ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.

ವೇದಿಕೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಫ್.ಹೆಚ್.ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಮತ್ತು ಸಂತೋಷ ಬಿರಾದಾರ ಉಪಸ್ಥಿತರಿದ್ದರು.

ಇದನ್ನೂ ಓದಿ ಹುಬ್ಬಳ್ಳಿ | ರಕ್ತದ ಮಡುವಿನಲ್ಲಿ ವೃದ್ಧೆಯ ಶವ ಪತ್ತೆ; ಮಗನಿಂದ ಕೊಲೆಯಾಗಿರುವ ಶಂಕೆ

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಂತೋಷ ಶೆಟ್ಟಿ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಟೆನ್ನಿಸ್ ತರಬೇತುದಾರರು, ನಿರ್ಣಾಯಕರು, ಸ್ಫರ್ಧಾಳುಗಳು, ಪಾಲಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...