ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ.
ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ. ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಸಣ್ಣ ಪ್ರತಿಭಟನೆ ನಡೆದರೂ ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ಸಂಪರ್ಕವೇ ಸ್ತಭ್ದಗೊಂಡು, ಗಂಟೆಗಟ್ಟಲೇ ನವಲಗುಂದದಲ್ಲೇ ವಾಹನಗಳು ಸಿಲುಕಿಕೊಳ್ಳುತ್ತಿದ್ದವು. ಹೀಗಾಗಿ ಈ ಪಟ್ಟಣಕ್ಕೆ ಬೈಪಾಸ್ ನಿರ್ಮಿಸಬೇಕು ಎಂಬುದು 30 ವರ್ಷಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಗ ಈಡೇರಿದ್ದು, ಅಂದಾಜು 400 ಕೋಟಿ ರೂಪಾಯಿ ವೆಚ್ಚದಲ್ಲಿ ನವಲಗುಂದ ಪಟ್ಟಣಕ್ಕೆ ಬೈಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ: ಹೋರಾಟ ಸಮಿತಿ ಸಂಭ್ರಮ
ಈ ಕುರಿತು ಶಾಸಕ ಎನ್ ಎಚ್ ಕೋನರೆಡ್ಡಿ ಮಾತನಾಡಿ, ಹಲವು ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು ಬಹಳ ಸಂತಸ ಉಂಟುಮಾಡಿದೆ. ಮತ್ತು ನನ್ನ ಅಧಿಕಾರಾವಧಿಯಲ್ಲೇ ಇಂತಹ ಮಹತ್ವ ಯೋಜನೆಗೆ ಮುಂದಾಗಿದ್ದು ಖುಷಿಯಾಗಿದೆ ಎಂದರು.