ಧಾರವಾಡ | ಜಾತಿ, ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ: ಡಾ. ವೀಣಾ ಬಿರಾದಾರ

Date:

ಜಾತಿ ಮತ್ತು ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ. ಧರ್ಮ ಯಾವುದೇ ಇರಲಿ, ನಾವೆಲ್ಲರೂ ಭಾರತೀಯರು ಎಂಬ ಉದಾತ್ತ ಭಾವನೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ಸಾಯಿ ಮಹಾವಿದ್ಯಾಲಯದ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಸಾಯಿ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಆಯೋಜಿಸಿದ್ದ ಶಿಕ್ಷಣದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

- Advertisement -

ಭಾರತದ ಏಳಿಗೆಯೇ ನಮ್ಮೆಲ್ಲರ ಧ್ಯೇಯವಾಗಬೇಕು. ಎಲ್ಲಾ ಮತ-ಪಂಥಗಳ ಜೀವನ ಶೈಲಿ ಮತ್ತು ನೀತಿ-ನಿಯಮಗಳ ಕುರಿತು ಗೌರವ ಭಾವನೆ ನಮ್ಮಲ್ಲಿ ಬೆಳೆಯಬೇಕು. ಬಸವಾದಿ ಶರಣರು ಮತ್ತು ಭಕ್ತಿ ಪಂಥದ ಪ್ರತಿಪಾದಕರು ಸಹ ಸರ್ವಸಮಾನತೆಯನ್ನು ತರಲು ಸಾಮರಸ್ಯದ ಬದುಕೇ ಶ್ರೇಷ್ಠ ಎಂದು ಸಾರಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ಉಪನ್ಯಾಸಕರಾಗಿ ಧಾರವಾಡ ಜಿಲ್ಲಾ ಇತಿಹಾಸ ಬೋಧಕರ ಸಂಘದ ಅಧ್ಯಕ್ಷ ಉದಯ ನಾಯಕ ಮಾತನಾಡಿ, “ದೇಶದ ಪ್ರಗತಿಯ ಪಥದಲ್ಲಿ ಜಾತಿಯ ವಿಷ ಬೀಜ ಕಪ್ಪು ಚುಕ್ಕೆಯಾಗಿದೆ. ನಮ್ಮ ಜಾತಿ-ಧರ್ಮ, ಆಚಾರ-ವಿಚಾರಗಳು ವಿಭಿನ್ನವಾಗಿದ್ದರೂ ನಾವೆಲ್ಲಾ ಭಾರತೀಯರು ಎಂಬ ಉದಾತ್ತ ಭಾವನೆಯೇ ಮುಖ್ಯ. ವೈವಿಧ್ಯತೆಯಲ್ಲಿ ಏಕತೆ ನಮ್ಮೆಲ್ಲರ ಸಂಸ್ಕೃತಿಯಾಗಬೇಕು. ನಾವೆಲ್ಲರೂ ಪರಸ್ಪರ ದ್ವೇಷ, ಅಸೂಯೆ ದೂರವಿರಿಸಿ ಅನ್ಯೋನ್ಯತೆಯಿಂದ ಬಾಳಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡೈಟ್ ನಿವೃತ್ತ ಉಪನ್ಯಾಸಕ ಕೆ.ಜಿ.ದೇವರಮನಿ ಮಾತನಾಡಿ, “ಭಾವೈಕ್ಯತೆಯ ಭಾವನೆ ಮೊದಲು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು. ಧರ್ಮ, ಜಾತಿಗಿಂತ ಮಾನವೀಯತೆ ಶ್ರೇಷ್ಠ ಎಂಬ ಭಾವನೆಯನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ವಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸುವ ಅಕ್ಕ-ಕಫೆ ಉದ್ಘಾಟನೆ

ಸವಿತಾ ಕರಿಕಟ್ಟಿ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಮೌನೇಶ ಬಡಿಗೇರ ನಿರೂಪಿಸಿದರು. ಎಂ. ಜಿ. ಸುಬೇದಾರ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...