ಧಾರವಾಡ | ಶತಮಾನದ ಕೆಲಗೇರಿ ಕೆರೆ ಸ್ವಚ್ಛತೆಗೆ 20 ದಿನಗಳ ಗಡುವು ನೀಡಿದ ನ್ಯಾ. ಕೆ.ಎನ್.ಫಣೀಂದ್ರ

Date:

Advertisements

ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1911 ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗಂಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ ಗಡುವು ನೀಡುತ್ತೇನೆ. ಈ ಕುರಿತು ಆಗಿರುವ ಕರ್ತವ್ಯಲೋಪ ಗುರುತಿಸಿ, ಸೂಕ್ತ ತನಿಖೆ ಕೈಗೊಳ್ಳಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುತ್ತಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.

ನವೆಂಬರ್ 20ರಂದು ನಗರದ ಕೆಲಗೇರಿ ಕೆರೆಗೆ ಭೇಟಿ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಉಪ ಲೋಕಾಯುಕ್ತ ನ್ಯಾಮೂರ್ತಿಗಳು ಸಾರ್ವಜನಿಕರೊಂದಿಗೆ ಸ್ವತಃ ಎರಡು ಕೀ.ಮಿ ನಡೆಯುವ ಮೂಲಕ ಕೆರೆಯ ಅವ್ಯವಸ್ಥೆ ಪರಿಶೀಲಿಸಿದರು. ಕೆರೆ ಅಭಿವೃದ್ಧಿಗಾಗಿ ಅವರೇ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದರು.

ಕೆರೆ ನಿರ್ವಹಣೆ ಹಾಗೂ ಕೆರೆ ಮಾಲಿಕತ್ವ ಸೇರಿದಂತೆ ಎಲ್ಲರನ್ನು ಈ ಪ್ರಕರಣದಲ್ಲಿ ಪಾರ್ಟಿ ಮಾಡಲಾಗುತ್ತದೆ. ಕೆರೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮತ್ತು ತಾಂತ್ರಿಕ ವರದಿಯನ್ನು ಸಲ್ಲಿಸಬೇಕು. ಮಹಾನಗರ ಪಾಲಿಕೆಯವರು ಈಗಾಗಲೇ ರೂ. 150 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ದಗೊಳಿಸಿರುವದಾಗಿ ತಿಳಿಸಿದ್ದಾರೆ. ಇದನ್ನು ಸಹ ಪಡೆದುಕೊಂಡು ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಕೆರೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.

Advertisements

ಕೆಲಗೇರಿ ಕೆರೆ ನಿರ್ವಹಣೆ ಮತ್ತು ಮಾಲಿಕತ್ವದ ವಿಚಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಮಹಾನಗರಪಾಲಿಕೆಗಳು ಪರಸ್ಪರ ಬೊಟ್ಟು ತೋರಿಸಿ, ಕೆರೆ ಸ್ವಚ್ಛತೆ, ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೆರೆಯಲ್ಲಿ ಸಾಕಷ್ಟು ಅಂತರಗಂಗೆ ಬೆಳೆದಿದೆ. ಕೆರೆ ವಾಕಿಂಗ್ ಪಾಥ್‍ದಲ್ಲಿ ಗಿಡಗಂಟಿ ಬೆಳೆದಿದೆ. ಚರಂಡಿ ನೀರು ಕೆರೆ ಸೇರುತ್ತಿದೆ. ಕೆರೆಯ ಸುತ್ತಲಿನ ಜನ ಮನೆಯ ದಿನಬಳಕೆ ತ್ಯಾಜ್ಯ, ಕಸಕಡ್ಡಿ ತಂದು ಕೆರೆಯಲ್ಲಿ ಹಾಕುತ್ತಿದ್ದಾರೆ. ಇದರ ಬಗ್ಗೆ ಯಾರು ಗಮನ ಹರಿಸಿಲ್ಲ ಎಂದು ತಮ್ಮ ಅಸಮಾದಾನ ವ್ಯಕ್ತಪಡಿಸಿ, ಮುಂದಿನ 20 ದಿನದಲ್ಲಿ ಕೆರೆ ಸ್ವಚ್ಛಗೊಳಿಸಿ, ಸುಂದರಗೊಳಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. 20 ದಿನಗಳ ನಂತರ ನಾನೇ ಕೆರೆ ನೋಡಲು ಬರುತ್ತೇನೆ ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಇಲಾಖೆಗಳ ಸಮನ್ವಯ ಸಾಧಿಸಿ, ಕೆರೆ ಅಭಿವೃದ್ದಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಮಾತನಾಡಿ, ನಾಳೆಯಿಂದ ಕೆರೆ ಸ್ವಚ್ಛತಾ ಕಾರ್ಯ ಆರಂಭಿಸುವದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X