ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

Date:

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

- Advertisement -

ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್ ಆಯೋಜಿಸಿದ್ದ ಮುಸ್ಲಿಂ ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಭಾರತ ದೇಶದಲ್ಲಿ ಜಾತಿ ಮತ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸಕ್ಕೆ ಮುಸಲ್ಮಾನರು ಮುಂದೆ ಬರಬೇಕು. ಎಲ್ಲಿಯವರೆಗೆ ಹಿಂದೂ ಮುಸ್ಲಿಂ ಸಮಾಜದವರು ಅಣ್ಣ ತಮ್ಮಂದಿರಾಗಿ ಇರುತ್ತಾರೋ ಅಲ್ಲಿಯವರೆಗೆ ಈ ದೇಶ ಒಡೆಯಲು ಸಾಧ್ಯವಿಲ್ಲ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ನಮ್ಮ ದೇಶ ಭಾರತಕ್ಕೆ ಗಂಡಾಂತರ ಎದುರಾಗಿದೆ ಜಾತಿ ಮತ್ತು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುವುದನ್ನು ನಿಲ್ಲಿಸಲು ನಾವು ನೀವೆಲ್ಲರೂ ಜವಾಬ್ದಾರರು ಎಂದು ಹೇಳಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಂತೋಷ್ ಲಾಡ್ ಪೌಂಡೇಶನ್  ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ತಿಳಿಸಿದರು.

ಅಂಜುಮನ್ ಕಾರ್ಯದರ್ಶಿ ಖಾದೀರ್ ನಜೀಮ ಸರಗಿರೋ ಅವರು ಪರಿಚಯಿಸಿದರು. ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ ಚಾನೆಲ್‌ನ ಸಂಪಾದಕ ಎಂ.ಕೆ.ನದಾಫ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಮುಸ್ಲಿಂರನ್ನು ಸಂತೋಷ್ ಲಾಡ್ ಸನ್ಮಾನಿಸಿದರು. ಡಾ.ಖೈರುದ್ದೀನ ಶೇಖ ಕಾರ್ಯಕ್ರಮ ನಿರೂಪಿಸಿದರು, ಸಾವಿರಾರು ಮುಸಲ್ಮಾನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...