ಧಾರವಾಡ | ಕಪ್ಪತಗುಡ್ಡ ಸಂರಕ್ಷಿಸುವ ಹೊಣೆ ಯುವ ಪೀಳಿಗೆಯ ಮೇಲಿದೆ: ನಂದಿವೇರಿ ಸ್ವಾಮೀಜಿ

Date:

ಸಸ್ಯ ಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತಗುಡ್ಡ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.

- Advertisement -

ಧಾರವಾಡ ನಗರದ ಕವಿವಿಯ ಸಿನೆಟ್ ಹಾಲ್‌ನಲ್ಲಿ ಗಾಂಧಿ ಅಧ್ಯಯನ ವಿಭಾಗ ಹಮ್ಮಿಕೊಂಡಿದ್ದ ಸಮಕಾಲೀನ ಪರಿಸರ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿ ಚಿಂತನೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಔಷಧಿ ಸಸ್ಯ ಸಂಕುಲ, ಉತ್ತಮ ಹವಾಗುಣ, ಶುದ್ಧ ಜಲಸಂಪತ್ತು ಇರುವ ಕಪ್ಪತಗುಡ್ಡದ ಮೇಲೆ ದುಷ್ಟ ಶಕ್ತಿಗಳು ಕಣ್ಣಿಟ್ಟಿವೆ. ಇದನ್ನು ಲೂಟಿ ಹೊಡೆಯಲು ಕಾಲ ಕಾಲಕ್ಕೆ ನಾನಾ ತಂತ್ರ ಮಾಡುತ್ತಿದ್ದಾರೆ. ಆದರೆ ಅದನ್ನು ಉಳಿಸಿಕೊಳ್ಳಲು ಮುಂದಿನ ಪೀಳಿಗೆ ಸಜ್ಜಾಗಬೇಕು. ಯುವಕರು ವರ್ಷಕ್ಕೆ ಒಂದು ಬಾರಿಯಾದರೂ ಕಪ್ಪತಗುಡ್ಡಕ್ಕೆ ಚಾರಣ ಹೋಗಿ, ಅದರ ರಕ್ಷಣೆಗೆ ಕಂಕಣ ಕಟ್ಟಬೇಕು ಎಂದರು.

ಇದನ್ನು ಓದಿದ್ದೀರಾ? ಗುಬ್ಬಿ | ಶಾಲೆ ಮುಂದೆ ಜಿಲೆಟಿನ್ ಕಡ್ಡಿ ಸ್ಫೋಟ: ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

ಚಿತ್ರನಟ ಸುರೇಶ ಹೆಬ್ಳಿಕರ್ ಮಾತನಾಡಿ, ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯಿಂದ ಪರಿಸರ ತೀವ್ರ ನಾಶವಾಗುತ್ತಿದೆ. ದೇಶಿ ಸಿದ್ದಾಂತಗಳ ಮೇಲೆ ಗಾಂಧಿಜಿ ತತ್ವಗಳ ಮೇಲೆ ಮತ್ತೆ ಪರಿಸರ ಸುಧಾರಿಸಲು ಅವಕಾಶವಿದ್ದು, ಯುವ ಪೀಳಿಗೆ ಸರಳ ಜೀವನ ರೂಢಿಸಿಕೊಳ್ಳಬೇಕು. ಆರ್ಥಿಕ ಪ್ರಗತಿ ಪರಿಸರ ನಾಶಕ್ಕೆ ಕಾರಣವಾಗದಂತಹ ದಾರಿ ಹುಡುಕಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಭಾರ ಕುಲಪತಿ ಡಾ.ಬಿ.ಎಂ.ಪಾಟೀಲ್ ಮಾತನಾಡಿ, ಜಗತ್ತು ಎಲ್ಲರ ಆಸೆಗಳನ್ನು ಪೂರೈಸಬಲ್ಲದು. ಪರಿಸರ ಜಾಗೃತಿ ಯುವ ಪೀಳಿಗೆಯಲ್ಲಿ ಹೆಚ್ಚಬೇಕಿದೆ ಎಂದರು.

ಅರ್ಥಶಾಸ್ತ್ರಜ್ಞ ಡಾ.ಗೋಪಾಲ ಕಡಿಕೋಡಿ, ಗಾಂಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶಿವಾನಂದ ಶೆಟ್ಟರ, ಪಕ್ಷಿ ತಜ್ಞ ಆರ್.ಜಿ.ತಿಮ್ಮಾಪೂರ, ಹರ್ಷವರ್ಧನ ಶೀಲವಂತ, ಬಾಲಚಂದ್ರ ಜಾಬಶೆಟ್ಟಿ ಅವರುಗಳು ಪರಿಸರ ಮತ್ತು ಗಾಂಧಿ ಚಿಂತನೆ ಕುರಿತು ವಿಷಯ ಮಂಡಿಸಿದರು. ಕವಿವಿ ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಡಾ.ಮಹಾದೇವ ದಳಪತಿ ಕಾರ್ಯಕ್ರಮ ನಿರೂಪಿಸಿದರು. ಡಾ.ಎಸ್.ಬಿ.ಬಸೆಟ್ಟಿ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...