ಧಾರವಾಡ |ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ಹೊಣೆ ಇಂದಿನ ಮಕ್ಕಳ ಹೆಗಲ ಮೇಲಿದೆ

Date:

ಇಂದಿನ ಮಕ್ಕಳಿಗೆ ಕನ್ನಡ ನಾಡು-ನುಡಿ, ನೆಲ, ಜಲ, ಸಂಸ್ಕೃತಿ ಹಾಗೂ ಪರಂಪರೆಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಮಕ್ಕಳು ಆಂಗ್ಲ ಭಾಷೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದರೂ, ಮಾತೃಭಾಷೆಯಾದ ಕನ್ನಡವನ್ನು ಪ್ರೀತಿಸಿ, ಗೌರವಿಸುವುದರ ಜೊತೆಗೆ ಕನ್ನಡ ಭಾಷೆಯನ್ನು ಹೆಮ್ಮೆಯ ಸಂಕೇತವಾಗಿಸಿಕೊಳ್ಳಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಹೇಳಿದರು.

- Advertisement -

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪದ ವತಿಯಿಂದ ಧಾರವಾಡದ ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕನ್ನಡ ನಾಡು-ನುಡಿ ಮತ್ತು ಪರಂಪರೆ ಕುರಿತ ವಿವಿಧ ಸ್ಪರ್ಧೆಗಳು ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಕ.ವಿ.ವ. ಸಂಘದ ಸಹಕಾರ್ಯದರ್ಶಿ ಕುಂಬಿ ಅವರು ಸಂಘ ನಡೆದು ಬಂದ ಹಾದಿ ಹಾಗೂ ಅದರ ಕಾರ್ಯಚಟುವಟಿಕೆಗಳ ಕುರಿತು ತಿಳಿಸಿದರು. ಡಾ.ವಿ. ಶಾರದಾ ಅವರು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಬಳಕೆಯಲ್ಲಿ ಸಮನ್ವಯ ಸಾಧಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫಿಲೋಮಿನಾ ಮೆನೇಜಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪವು ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಕನ್ನಡ ನಾಡು-ನುಡಿ ಮತ್ತು ಪರಂಪರೆ ಕುರಿತು ಭಾಷಣ ಸ್ಪರ್ಧೆ, ಕನ್ನಡ ನಾಡಿನ ಜನಪದ ಕಲೆಗಳ ಕುರಿತು ಚಿತ್ರಕಲಾ ಸ್ಪರ್ಧೆ ಹಾಗೂ ಕನ್ನಡ ಶಬ್ದಗಳ ಬಳಕೆ ಸ್ಪರ್ಧೆ ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಕೊನೆಯಲ್ಲಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಮಂಟಪದ ಸಂಚಾಲಕಿ ಡಾ. ಶೈಲಜಾ ತ. ಅಮರಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಆಶಯ ಹಾಗೂ ಔಚಿತ್ಯವನ್ನು ವಿವರಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ‘ಹಚ್ಚೇವು ಕನ್ನಡದ ದೀಪ’ ನೃತ್ಯ ಪ್ರದರ್ಶನ ಸಭಿಕರ ಮನ ಸೆಳೆಯಿತು.ಜ್ಯೋತಿ ಪಂಜಿಕರ್ ಸ್ವಾಗತಿಸಿದರು.

ಶಶಿರೇಖಾ ಹುಕ್ಕೇರಿ ನಿರೂಪಿಸಿದರು. ಲಕ್ಷ್ಮಿ ಕುರಿ ವಂದಿಸಿದರು.ಕೆ.ಜಿ. ದೇವರಮನಿ, ಡಾ. ಪ್ರೇಮ ಕೋಟಿ, ರೇಖಾ ಅಂತಕ್ಕನವರ, ವೀರಯ್ಯ ಕೆಂಭಾವಿಮಠ, ಸಿಪಿಐ ಶಿವರಾಜ ಪಾಟೀಲ, ನಾಗರತ್ನ ನಾಗಶೆಟ್ಟಿ, ರೀಟಾ ಬೊರ್ಜೀಸ್, ಬಸವರಾಜ ಪಟ್ಟಣ, ಅಶ್ರೀತ, ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನುಡಿಯು ಸಿರಿಯಲ್ಲ ಬದುಕು’: ಕಡಲನಗರಿಯಲ್ಲಿ ನಾಳೆಯಿಂದ ಎರಡು ದಿನ ‘ಜನ ನುಡಿ – 2026’

‘ನುಡಿಯು ಸಿರಿಯಲ್ಲ ಬದುಕು’ ಎಂಬ ಆಶಯದೊಂದಿಗೆ ‘ಜನ ನುಡಿ – 2026’...

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ...

ಶಿವಮೊಗ್ಗ |ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ ಅಗತ್ಯ: ಉಪವಿಭಾಗಾಧಿಕಾರಿ ಡಾ. ಮೈತ್ರಿ ಕರೆ

ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರ ಕಲುಷಿತತೆಯನ್ನು ತಡೆಗಟ್ಟಲು ಆಹಾರ...