ಧಾರವಾಡ | ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ: ಭುವನೇಶ ಪಾಟೀಲ

Date:

ಸಮಾಜದಲ್ಲಿ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೊಲೀಸ ಅಧಿಕಾರಿ, ಸಿಬ್ಬಂದಿಗಳ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಮತ್ತು ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ ಬೆಂಬಲ, ಸಹಕಾರ ನೀಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

- Advertisement -

ಧಾರವಾಡ ಜಿಲ್ಲಾ ಪೊಲೀಸ ಇಲಾಖೆಯಿಂದ ಪೊಲೀಸ್ ಹೆಡ್ ಕ್ವಾಟರ್ಸದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ನಮ್ಮೆಲ್ಲರ ರಕ್ಷಣೆ ಹಾಗೂ ನಾಗರಿಕ ಹಕ್ಕುಗಳನ್ನು ಕಾಪಾಡಲು ತಮ್ಮನ್ನು ಕರ್ತವ್ಯದ ಮೂಲಕ ಅರ್ಪಿಸಿಕೊಂಡಿರುವ ಆರಕ್ಷಕರನ್ನು ಯಾವಾಗಲೂ ನಾವು ಗೌರವ, ಹೆಮ್ಮೆಯಿಂದ ಕಾಣಬೇಕು. ಸಮಾಜದ ಸಂರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ, ಅವರ ಕುಟುಂಬಗಳಿಗೆ ಪ್ರತಿಯೊಬ್ಬರು ಬೆಂಬಲ ನೀಡಿ, ಗೌರವಿಸಬೇಕು. ಪೊಲೀಸರ ತ್ಯಾಗ, ಬಲಿದಾನಗಳನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೊಲೀಸ್ ವ್ಯವಸ್ಯೆ ಸುಧಾರಣೆಗೆ, ಮೂಲಸೌಕರ್ಯ, ಸೌಲಭ್ಯಗಳ ಪೂರೈಸಲು ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅನೇಕ ಸಮಿತಿಗಳು ಈ ಕುರಿತು ವರದಿ ಸಲ್ಲಿಸಿವೆ. ಸರಕಾರ ಸದಾಕಾಲ ಪೊಲೀಸ್ ಇಲಾಖೆಯೊಂದಿಗೆ ಇರುತ್ತದೆ. ಪೊಲೀಸ ಕುಟುಂಬದವರ ಸಹಕಾರ, ಬೆಂಬಲ, ಪ್ರೇರಣೆ, ಪ್ರೋತ್ಸಾಹಗಳು ಪೊಲೀಸರು ನೆಮ್ಮದಿಯಿಂದ, ತೃಪ್ತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಪೊಲೀಸ ಇಲಾಖೆಗೆ ಸರಕಾರದಿಂದ ಎಲ್ಲ ಹಂತದ ತರಬೇತಿ, ಆಧುನಿಕ ಸೌಲಭ್ಯ ದೊರಕಿಸಲಾಗುತ್ತಿದೆ. ಪೊಲೀಸ ವ್ಯವಸ್ಥೆಯ ಆಧುನೀಕರಣವೂ ಅಗತ್ಯವಿದೆ ಎಂದು ಹೇಳಿದರು.

ಧಾರವಾಡ ಐಐಟಿ ನಿರ್ದೇಶಕ ಪ್ರೊ.ವೆಂಕಪ್ಪಯ್ಯ ದೇಸಾಯಿ ಮಾತನಾಡಿ, ಸಮಾಜಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸುವುದು ಎಲ್ಲ ನಾಗರಿಕರ ಜವಾಬ್ದಾರಿ ಆಗಿದೆ. ಸಮಾಜದ ರಕ್ಷಣೆ, ಶಾಂತಿ ಕಾಪಾಡುವುದು ಬರೀ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿಗಳ ಹೊಣೆಗಾರಿಕೆ ಆಗಬಾರದು. ಪೊಲೀಸ ಅಧಿಕಾರಿಗಳ ತ್ಯಾಗ, ಬಲಿದಾನವನ್ನು ನಾವು ಸದಾಕಾಲ ಸ್ಮರಿಸಬೇಕು. ಅವರ ನಿರಂತರ ಕಾವಲಿನಲ್ಲಿ ನಾವು ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಎಆರ್ ವಿಭಾಗದ ಎಆರ್ ಎಸ್ಐ ಎ.ಎಪ್.ಜಿಲ್ಲೇನವರ ಹಾಗೂ ವೈ.ಎಂ.ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...