ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತರಕಾರಿ ಸಾಗಿಸುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ಧಾರವಾಡದ ಆರ್‌ಟಿಓ ಕಚೇರಿಯ ಹತ್ತಿರ ಸಂಭವಿಸಿದೆ.
ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ವಾಹನದಲ್ಲಿದ್ದ ತರಕಾರಿ ರಸ್ತೆಯಲ್ಲಾ ಚೆಲ್ಲಿತ್ತು. ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಿಂದ ತರಕಾರಿ ಲೋಡ್ ಮಾಡಿಕೊಂಡು ಧಾರವಾಡ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಾಹನ ಪಲ್ಟಿಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ವಾಹನವನ್ನು ಪಕ್ಕಕ್ಕೆ ಸರಿಸಲು ಕ್ರಮಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ
ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.