ಕಳೆದ ನಾಲ್ಕೈದು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಗೆ ಊಟ ಮಾಡುತ್ತಿದ್ದ ಸಮಯದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗುಂಡಹುಣಸಿ ಗ್ರಾಮದಲ್ಲಿ ಕುಟುಂಬಸ್ಥರು ಮನೆಯಲ್ಲಿ ಊಟಕ್ಕೆ ಕುಳಿತ್ತಿದ್ದ ಸಂದರ್ಭದ ಮನೆಯ ಗೋಡೆ ಭಾರಿ ಮಳೆಗೆ ನೆನೆದು ಕುಸಿದು ಬಿದ್ದಿದೆ. ಊಟ ಮಾಡುತ್ತಿದ್ದ ಮನೆಯ ಮಾಲೀಕ ರಾಜೇಸಾಬ ಮತ್ತಿಗಟ್ಟಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಗುಬಸೇರಿ ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಭೀಕರ ಕೊಲೆ: ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧನ
ಮನೆಯ ಗೋಡೆ ಕುಸಿದ ಕಾರಣ ಕುಟುಂಬಸ್ಥರು ಹತ್ತಿರದ ಗುಡಿಯೊಂದರಲ್ಲಿ ರಾತ್ರಿಯಿಡಿ ತಂಗಿದ್ದು, ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.