ಧಾರವಾಡ | ವ್ಯಕ್ತಿಯ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಇರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

Date:

ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರನೆ ಆಗಿರಲಿ, ಸಾರ್ವಜನಿಕರೆ ಆಗಿರಲಿ, ಪ್ರತಿ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ನಾವು ಸ್ವಸ್ಥ, ನೆಮ್ಮದಿಯ ಜೀವನ ಕಾಣಲು ಸಾಧ್ಯವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

- Advertisement -

ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಅಯೋಜಿಸಿದ್ದ, ಜವಾಬ್ದಾರಿ ಧ್ಯೇಯವಾಕ್ಯದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಪ್ರಾಮಾಣಿಕತೆ, ಪಾರದರ್ಶಕತೆ ವ್ಯಕ್ತಿಯ ವೈಯಕ್ತಿಕ, ಸಾರ್ವಜನಿಕ ಜೀವನದಲ್ಲಿ ಅಗತ್ಯವಿದೆ. ಭ್ರಷ್ಟಾಚಾರ, ಅನೈತಿಕತೆ ಬಗ್ಗೆ ಜಾಗೃತಿ ಮೂಡಿಸುವ ಇಂದು ಅಗತ್ಯವಿದೆ. ಪ್ರತಿ ಹಂತದಲ್ಲೂ ಕಾನೂನಾತ್ಮಕವಾಗಿ, ನೈತಿಕವಾಗಿ ಶುದ್ಧ ಜೀವನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಾನೂನು ಹೇಳುವ ರೀತಿಯಲ್ಲಿ ಎಲ್ಲರೂ ನಡೆದುಕೊಳ್ಳಬೇಕು. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕಾರ್ಯಕ್ರಮ ಉದ್ಘಾಟಿಸಿದ (ಪ್ರಭಾರ) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಕುಮಾರ ಸಿ. ಮಾತನಾಡಿ, ಭ್ರಷ್ಟಾಚಾರ ಒಂದು ರೀತಿಯ ಕ್ಯಾನ್ಸರ್. ಅದಕ್ಕೆ ಆರಂಭದಲ್ಲೆ ಚಿಕಿತ್ಸೆ ನೀಡಬೇಕು. ಪ್ರತಿಯೊಬ್ಬ ಸರಕಾರಿ ಅಧಿಕಾರಿ, ನೌಕರರು ತಮ್ಮ ದಿನನಿತ್ಯದ ವೃತ್ತಿಯಲ್ಲಿ ಪ್ರಾಮಾಣಿಕತೆ, ಮಾನವೀಯತೆ ಅಳವಡಿಕೊಂಡು, ನಿರ್ವಹಿಸಿದರೆ ಮಾತ್ರ ಉತ್ತಮ ಆಡಳಿತ, ಕಲ್ಯಾಣ ರಾಜ್ಯದ ಕಲ್ಪನೆ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ದೇಶಿಸಿದ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ‌, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಮಾತನಾಡಿದರು. ಲೋಕಾಯುಕ್ತ ಸಿಪಿಐ ಪ್ರಭುಲಿಂಗಯ್ಯ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಮತ್ತು ಮೊಹಮ್ಮದಾಲಿ ತಹಸಿಲ್ದಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡ್ರ ವೇದಿಕೆಮೇಲಿದ್ದರು. ಕಾರ್ಯಕ್ರಮದಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವೆಂಕನಗೌಡ ಪಾಟೀಲ, ರವೀಂದ್ರ ಕುರಬಗಟ್ಡಿ, ಪೊಲೀಸ್ ಇನ್ಸ್ಪೆಕ್ಟರ್ ಕರುಣೇಶಗೌಡ, ಬಸವರಾಜ ಬುದ್ನಿ, ಪ್ರಸಾದ ಪರಣೇಕರ, ತಹಸಿಲ್ದಾರ ಡಿ.ಎಚ್.ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...